ಪಿರಿಯಾಪಟ್ಟಣದ ತಾಲೂಕು ಆಡಳಿತ ಭವನದಲ್ಲಿ ಶಾಸಕ ಕೆ.ಮಹದೇವ್ ಅವರ ಅಧ್ಯಕ್ಷತೆಯಲ್ಲಿ ಗಣರಾಜ್ಯೋತ್ಸವ ಆಚರಣೆ ಸಂಬಂಧ ಪೂರ್ವಭಾವಿ ಸಭೆ ನಡೆಯಿತು

ಪಿರಿಯಾಪಟ್ಟಣ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಜ.26 ರಂದು ತಾಲೂಕಿನಲ್ಲಿ ನಡೆಯುವ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಪ್ರತಿಯೊಂದು ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ತಾಲೂಕು ಆಡಳಿತದೊಂದಿಗೆ ಸಹಕರಿಸುವಂತೆ ಶಾಸಕ ಕೆ.ಮಹದೇವ್ ಹೇಳಿದರು. 

ಪಟ್ಟಣದ ತಾಲೂಕು ಆಡಳಿತ ಭವನದಲ್ಲಿ ಗಣರಾಜ್ಯೋತ್ಸವ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು, ತಾಲೂಕಿನ ಪ್ರತಿಯೊಂದು ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹಕಾರ ನೀಡಿದಾಗ ಮಾತ್ರ ರಾಷ್ಟ್ರೀಯ ಹಬ್ಬ ಮತ್ತು ಮಹನೀಯರ ಜಯಂತಿ ಯಶಸ್ವಿಯಾಗಿ ಆಚರಿಸಲು ಸಾಧ್ಯ, ಪ್ರತಿಯೊಂದು ಇಲಾಖೆಗಳು ತಮಗೆ ವಹಿಸಿದ ಕೆಲಸಗಳನ್ನು ಸಂಘಟನಾತ್ಮಕವಾಗಿ ನಿರ್ವಹಿಸಿ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ತಿಳಿಸಿ ಸರ್ಕಾರಿ ಕಾರ್ಯಕ್ರಮ ಹಾಗೂ ಪೂರ್ವಭಾವಿ ಸಭೆಗೆ ಗೈರಾಗುವ ಇಲಾಖೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗುವ ಎಚ್ಚರಿಕೆ ನೀಡಿದರು.

ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷರಾದ ತಹಸೀಲ್ದಾರ್ ಯದು ಗಿರೀಶ್ ಅವರು ಮಾತನಾಡಿ ಈ ಹಿಂದೆ ತಾಲೂಕಿನಲ್ಲಿ ಅದ್ದೂರಿಯಾಗಿ ನಡೆದುಕೊಂಡು ಬಂದ ಗಣರಾಜ್ಯೋತ್ಸವ ಆಚರಣೆಯಂತೆ ಈ ಬಾರಿಯೂ ಕಾರ್ಯಕ್ರಮ ರೂಪಿಸಲು ಪ್ರತಿಯೊಂದು ಇಲಾಖೆಗಳು ತಮಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು, ಶಾಲಾ ವಿದ್ಯಾರ್ಥಿಗಳ ಪಥಸಂಚಲನ ವೇದಿಕೆ ಕಾರ್ಯಕ್ರಮ ಗಣ್ಯರಿಗೆ ಗೌರವ ಉಪಹಾರ ವಿತರಣೆ ಸೇರಿದಂತೆ ಎಲ್ಲಾ ಕೆಲಸಗಳಿಗೆ ಪ್ರತಿಯೊಬ್ಬರೂ ನಿಗಾ ವಹಿಸಿ ಯಶಸ್ಸಿಗೆ ಸಹಕರಿಸುವಂತೆ ತಿಳಿಸಿದರು.

 ತಾ.ಪಂ ಇಒ ಸಿ.ಆರ್ ಕೃಷ್ಣಕುಮಾರ್ ಅವರು ಮಾತನಾಡಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಚರಿಸುವ ಎಲ್ಲಾ ಹಬ್ಬ ಮತ್ತು ಜಯಂತಿಗಳು ಕೇವಲ ಒಂದು ಇಲಾಖೆ ಅಧಿಕಾರಿ ಸಿಬ್ಬಂದಿ ನಿರ್ವಹಿಸಲು ಕಷ್ಟ ಇರುವುದರಿಂದ ತಾಲೂಕಿನ ಪ್ರತಿಯೊಂದು ಇಲಾಖೆಯವರು ಸಮಿತಿ ಪದಾಧಿಕಾರಿಗಳೊಂದಿಗೆ ಕೈಜೋಡಿಸುವಂತೆ ತಿಳಿಸಿದರು.

ಈ ಸಂದರ್ಭ ಪುರಸಭೆ ಅಧ್ಯಕ್ಷ ಕೆ.ಮಹೇಶ್, ಬಿಇಒ ಬಸವರಾಜು, ಇನ್ಸ್ಪೆಕ್ಟರ್ ಗಳಾದ ಶ್ರೀಧರ್, ಪ್ರಕಾಶ್, ಪುರಸಭೆ ಮುಖ್ಯಾಧಿಕಾರಿ ಮಹೇಂದ್ರ ಕುಮಾರ್, ಜಿ.ಪಂ ಎಇಇ ಮಲ್ಲಿಕಾರ್ಜುನ್, ಪಿಡಬ್ಲ್ಯೂಡಿ ಎಇಇ ವೆಂಕಟೇಶ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಭಾರತಿ, ಪಶು ವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಸಾರಿಗೆ ಘಟಕ ವ್ಯವಸ್ಥಾಪಕ ದರ್ಶನ್ ರಾಮಚಂದ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ಸಿಡಿಪಿಒ ಮಮತಾ, ಆಹಾರ ಇಲಾಖೆ ಶಿರಸ್ತೆದಾರ್ ಸಣ್ಣಸ್ವಾಮಿ, ಆರ್ ಡಬ್ಲ್ಯೂಎಸ್ ಇಲಾಖೆ ಎಇಇ ಬಿ.ಸಿ ಹಿತೇಂದ್ರ, ಚೆಸ್ಕಾಂ ಎಇಇ ಗಳಾದ ಆಕಾಶ್, ಸುನಿಲ್ ಯಾದವ್, ಶಿರಸ್ತೆದಾರ್ ಗಳಾದ ನಂದಕುಮಾರ್, ಟ್ರಿಜಾ ಮತ್ತಿತರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top