ಶಾಸಕನಾದ ಮೊದಲ ಅಧಿವೇಶನದಲ್ಲಿಯೇ ಆದಿವಾಸಿ ಬುಡಕಟ್ಟು ಸಮುದಾಯದ ಸಮಸ್ಯೆಗಳ ಬಗ್ಗೆ ಧ್ವನಿಯೆತ್ತಿ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ ಎಂದು ಶಾಸಕ ಕೆ.ಮಹದೇವ್ ಹೇಳಿದರು

ಪಟ್ಟಣದಲ್ಲಿ ತಾಲ್ಲೂಕು ಆಡಳಿತ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಮೂಲ ನಿವಾಸಿ ಅಭಿವೃದ್ಧಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ವಸತಿ ನಿರ್ಮಾಣದ ಕಾಮಗಾರಿ ಹಕ್ಕು ಪತ್ರ ವಿತರಿಸಿ ಅವರು ಮಾತನಾಡಿದರು, ಆದಿವಾಸಿ ಬುಡಕಟ್ಟು ಜನತೆ ವಾಸಿಸುವ ಗ್ರಾಮಗಳಿಗೆ ರಸ್ತೆ, ಚರಂಡಿ, ಕುಡಿಯುವ ನೀರು ಸರಬರಾಜು ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿದ್ದೇನೆ ವಸತಿ ಸಚಿವ ಸೋಮಣ್ಣರವರಿಗೆ ಮನವಿ ಮಾಡಿ ತಾಲ್ಲೂಕಿಗೆ 730 ಮನೆಗಳನ್ನು ಮಂಜೂರು ಮಾಡಿಸಿ 430 ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ನೀಡಲಾಗಿದ್ದು ಅತಿ ಶೀಘ್ರದಲ್ಲಿ ಇನ್ನುಳಿದ ಮನೆಗಳನ್ನು ತಾಲ್ಲೂಕಿಗೆ ತರುತ್ತೇನೆ, ಸೋಲಿಗ ಸಮುದಾಯದಲ್ಲಿಯೂ ಕೂಡ ವಸತಿ ರಹಿತರಿದ್ದು ಇವರಿಗೆ 500 ಮನೆಗಳನ್ನು ಮಂಜೂರು ಮಾಡಿಸಲು ಶ್ರಮಿಸುತ್ತಿದ್ದೇನೆ,

ಈ ಹಿಂದೆ ಅಧಿಕಾರದಲ್ಲಿದ್ದ ಚುನಾಯಿತ ಪ್ರತಿನಿಧಿಗಳು ಈ ಸಮುದಾಯದ ಮೇಲೆ ಕಾಳಜಿ ವಹಿಸದೆ ಇಂದು ಈ ಸಮುದಾಯವು ಮುಖ್ಯ ವಾಹಿನಿಗೆ ಬರಲು ಸಾಧ್ಯವಾಗಿಲ್ಲ ಮಾಜಿ ಶಾಸಕ 

ಕೆ. ವೆಂಕಟೇಶ್ ನನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿರುವುದನ್ನು ನಿಲ್ಲಿಸಿ ಆರೋಗ್ಯ ಪೂರ್ಣ ರಾಜಕಾರಣ ಮಾಡುವುದನ್ನು ಕಲಿಯಬೇಕು, ಬಡ ಕುಟುಂಬದಿಂದ ಬಂದ ವ್ಯಕ್ತಿ ನಾನು ಶ್ರಮಪಟ್ಟು ತಾಲ್ಲೂಕಿನ ಜನತೆಯ ಆಶೀರ್ವಾದದಿಂದ ಶಾಸಕನಾಗಿ ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ ಎಂದರು.

ತಾ.ಪಂ ಇಒ ಸಿ.ಆರ್ ಕೃಷ್ಣಕುಮಾರ್ ಹಾಗೂ ತಹಸೀಲ್ದಾರ್ ಯದು ಗಿರೀಶ್ ಮಾತನಾಡಿದರು,

ಕಾರ್ಯಕ್ರಮದಲ್ಲಿ  ಆದಿವಾಸಿ ಸಮುದಾಯದ ಹೋರಾಟಗಾರ ಬಿರ್ಸಾ ಮುಂಡರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು,  ರಾಣಿಗೇಟು, ಅಬ್ಬಳತಿ, ಮುತ್ತೂರು ಆದಿವಾಸಿ ಬುಡಕಟ್ಟು ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು  ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಈ ಸಂದರ್ಭ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶ ಸಿದ್ದೇಗೌಡ, ಪಶುಪಾಲನ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಜಿ.ಪಂ ಎಇಇ ಮಲ್ಲಿಕಾರ್ಜುನ, ಪುರಸಭೆ ಅಧ್ಯಕ್ಷ ಕೆ.ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಸಿ ಕೃಷ್ಣ, ಚೌತಿ ಗ್ರಾ.ಪಂ ಅಧ್ಯಕ್ಷೆ ಗೌರಿ, ಉಪಾಧ್ಯಕ್ಷ ಲಕ್ಷ್ಮಣ್, ಮಾಜಿ ಉಪಾಧ್ಯಕ್ಷ ರವಿಚಂದ್ರ ಬೂದಿತಿಟ್ಟು, ಪೂವಮ್ಮ, ಹರೀಶ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್ ರವಿ, ತಾ.ಪಂ ಕಚೇರಿ ಸಿಬ್ಬಂದಿ ವಿಶ್ವನಾಥ್, ಸೋಮಶೇಖರ್ ಮತ್ತಿತರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top