ಪಿರಿಯಾಪಟ್ಟಣ: ರಾಜ್ಯದಲ್ಲಿ ಜೆಡಿಎಸ್ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಾಗ ಮಾತ್ರ ಜನರ ಏಳಿಗೆ ಸಾಧ್ಯ ಎಂದು ಶಾಸಕ ಕೆ.ಮಹದೇವ್ ಹೇಳಿದರು.
ತಾಲೂಕಿನ ವಿವಿದೆಡೆ ಚುನಾವಣಾ ಪ್ರಚಾರ ಕೈಗೊಂಡು ಕೊಪ್ಪ ಗ್ರಾಮದಲ್ಲಿ ಅವರು ಮಾತನಾಡಿದರು, ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಎರಡು ಅವಧಿಯಲ್ಲಿಯೂ ಸಿಕ್ಕ ಕಡಿಮೆ ಅವಧಿ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ರಾಜ್ಯದ ಅಭಿವೃದ್ಧಿಗೆ ಶ್ರಮಿಸಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದರು ಇದನ್ನ ಸಹಿಸದ ವಿರೋಧ ಪಕ್ಷಗಳ ಕುತಂತ್ರದಿಂದಾಗಿ ಅಧಿಕಾರ ಕಳೆದುಕೊಳ್ಳುವಂತಾಗಿದ್ದು ರಾಜ್ಯದ ಸರ್ವಾಂಗಿಣ ಅಭಿವೃದ್ಧಿ ಜೆಡಿಎಸ್ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಾಗ ಮಾತ್ರ ಸಾಧ್ಯ, ಮೊದಲ ಬಾರಿಗೆ ಶಾಸಕನಾದರೂ ತಾಲೂಕಿನ ಸರ್ವ ಜನಾಂಗದ ಅಭಿವೃದ್ಧಿಗೆ ಶ್ರಮಿಸಿ ಸ್ಥಳೀಯ ಮೂಲಭೂತ ಸಮಸ್ಯೆಗಳ ಪರಿಹಾರ ಮಾಡಿದ್ದೇನೆ ಇದನ್ನು ಮನಗಂಡು ಮುಂಬರುವ ಚುನಾವಣೆಯಲ್ಲಿ ಮತ ನೀಡಿ ಮತ್ತೊಮ್ಮೆ ಗೆಲ್ಲಿಸಿ ತಮ್ಮಗಳ ಸೇವೆ ಮಾಡಿ ತಾಲೂಕನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಸಹಕರಿಸುವಂತೆ ಮನವಿ ಮಾಡಿದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ ಅವರು ಮಾತನಾಡಿ ಶಾಸಕ ಕೆ.ಮಹದೇವ್ ಅವರ ಅವಧಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಮನಗಂಡು ಮತದಾರರು ಮುಂಬರುವ ಚುನಾವಣೆಯಲ್ಲಿ ಬೆಂಬಲಿಸಿ ಗೆಲ್ಲಿಸುವಂತೆ ಕೋರಿದರು.
ಕೊಪ್ಪ ಗ್ರಾ.ಪಂ ಅಧ್ಯಕ್ಷ ರೇಣುಕಸ್ವಾಮಿ ಅವರು ಮಾತನಾಡಿ ಜನ ಸಾಮಾನ್ಯರಿಗೆ ಹತ್ತಿರವಿದ್ದು ಅವರ ಕಷ್ಟ ಸುಖಗಳಿಗೆ ಸ್ಪಂದಿಸಿ ತಾಲೂಕನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತಿರುವ ಶಾಸಕ ಕೆ.ಮಹದೇವ್ ಅವರನ್ನು ಗೆಲ್ಲಿಸುವ ಮೂಲಕ ಕುಮಾರಣ್ಣ ಅವರ ಕೈ ಬಲಪಡಿಸಿ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬರಲು ಪ್ರತಿಯೊಬ್ಬರು ಶ್ರಮಿಸುವಂತೆ ತಿಳಿಸಿದರು.
ಈ ವೇಳೆ ಮಂಚದೇವನಹಳ್ಳಿ ತಿರುಮಲಾಪುರ ಬೈಲಕುಪ್ಪೆ ಲಕ್ಷ್ಮಿಪುರ ದೊಡ್ಡಹೊನ್ನೂರು ಚಿಕ್ಕಹೊನ್ನೂರು ದೊಡ್ಡಹರವೆ ಮರೂರು ರಾಣಿಗೇಟ್ ದೊಡ್ಡಹೊಸೂರು ಚಿಕ್ಕಹೊಸೂರು ಗಿರಗೂರು ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಯಿತು.
ಈ ಸಂದರ್ಭ ಜೆಡಿಎಸ್ ತಾಲೂಕು ಘಟಕ ಅಧ್ಯಕ್ಷೆ ಪ್ರೀತಿ ಅರಸ್, ಟಿಎಪಿಸಿಎಂಎಸ್ ನಿರ್ದೇಶಕಿ ಸುನಿತಾ ಮಂಜುನಾಥ್, ಗ್ರಾ.ಪಂ ಸದಸ್ಯರಾದ ಮಂಜುನಾಥ್, ಮೋಹನ್ ಕುಮಾರ್, ಮುಖಂಡರಾದ ಕೃಷ್ಣೇಗೌಡ, ಕೆ.ಕೆ ಅನಿತ್, ವಕೀಲ ಗೋವಿಂದೇಗೌಡ, ಚಂದ್ರಶೇಖರ್ ಹಾಗೂ ಸ್ಥಳೀಯ ಜೆಡಿಎಸ್ ಜನಪ್ರತಿನಿಧಿಗಳು ಗ್ರಾಮಸ್ಥರು ಇದ್ದರು.