ಪಿರಿಯಾಪಟ್ಟಣ: ತಮ್ಮ ಗ್ರಾಮಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಮನಗಂಡು ಮುಂಬರುವ ಚುನಾವಣೆಯಲ್ಲಿಯೂ ಮತ ನೀಡಿ ಗೆಲ್ಲಿಸುವಂತೆ ಶಾಸಕ ಕೆ.ಮಹದೇವ್ ಮನವಿ ಮಾಡಿದರು.
ತಾಲೂಕಿನ ವಿವಿದೆಡೆ ಪ್ರಚಾರ ಕೈಗೊಂಡು ಹಬಟೂರು ಗ್ರಾಮದಲ್ಲಿ ಅವರು ಮಾತನಾಡಿದರು, ಮೊದಲ ಬಾರಿ ಶಾಸಕನಾಗಿ ಆಯ್ಕೆಯಾದ ಸಂದರ್ಭ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಸರ್ಕಾರವಿಲ್ಲದಿದ್ದರು ತಾಲೂಕಿನ ಮೂಲಭೂತ ಸೌಕರ್ಯಗಳ ಬಗ್ಗೆ ಸಂಬಂಧಿಸಿದ ಸಚಿವರು ಹಾಗೂ ಅಧಿಕಾರಿಗಳಿಗೆ ಮನವರಿಕೆ ಮಾಡಿ ಅನುದಾನ ಮಂಜೂರು ಮಾಡಿಸಿ ಪ್ರತಿ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯ ಸಮಸ್ಯೆ ಬಗೆಹರಿಸಿದ್ದೇನೆ, ಗ್ರಾಮಗಳಿಗೆ ಭೇಟಿ ಸಂದರ್ಭ ಹಾಗೂ ನನ್ನ ನಿವಾಸಕ್ಕೆ ಆಗಮಿಸಿ ಸಾರ್ವಜನಿಕರು ನೀಡುವ ಸಮಸ್ಯೆ ಮನವಿಯನ್ನು ಶೀಘ್ರ ಪರಿಹರಿಸಿದ್ದು ತಾಲೂಕಿನ ಸರ್ವಾಂಗಿಣ ಅಭಿವೃದ್ಧಿಗಾಗಿ ಮತ್ತೊಂದು ಬಾರಿ ಅವಕಾಶ ನೀಡುವಂತೆ ಕೋರಿದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ ಅವರು ಮಾತನಾಡಿ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದ್ದು ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ತಂದರೆ ಪಂಚರತ್ನ ಯೋಜನೆ ಮೂಲಕ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಿ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.
ಈ ಸಂದರ್ಭ ಜೆಡಿಎಸ್ ಮಹಿಳಾ ಘಟಕ ಅಧ್ಯಕ್ಷೆ ಪ್ರೀತಿ ಅರಸ್, ಟಿಎಪಿಸಿಎಂಎಸ್ ನಿರ್ದೇಶಕಿ ಸುನಿತಾ ಮಂಜುನಾಥ್, ಚೌತಿ ಗ್ರಾ.ಪಂ ಅಧ್ಯಕ್ಷೆ ಗೌರಿ, ಉಪಾಧ್ಯಕ್ಷ ಲಕ್ಷ್ಮಣ್ ಪಟೇಲ್ ಮುಖಂಡರಾದ ಚಂದ್ರೇಶ್, ರಾಮಚಂದ್ರು, ಶಿವರಾಜು, ರಘು, ರಾಮೇಗೌಡ, ಜ್ಯೋತಿಗೌಡ ಹಾಗು ಕಾರ್ಯಕರ್ತರು ಇದ್ದರು.