
ತಾಲೂಕಿನ ಪಂಚವಳ್ಳಿ, ಮಾಲಂಗಿ, ಚೌತಿ ಮತ್ತು ಚಿಟ್ಟೇನಹಳ್ಳಿ ಗ್ರಾ.ಪಂ ಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು, ಗ್ರಾ.ಪಂ ಚುನಾಯಿತ ಪ್ರತಿನಿಧಿಗಳ ಅವಧಿ ಮುಗಿದ ಕಾರಣ ಈಗಾಗಲೇ ತಾಲೂಕಿನ 34 ಗ್ರಾ.ಪಂ ವ್ಯಾಪ್ತಿಗೆ ಆಡಳಿತ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ, ಕೋವಿಡ್-19 ಮಹಾಮಾರಿ ರೋಗ ಮೊದಲು ನಗರ ಪ್ರದೇಶಗಳಿಗೆ ಸೀಮಿತವಾಗಿ ಪ್ರಸ್ತುತ ಗ್ರಾಮಾಂತರ ಪ್ರದೇಶಗಳಲ್ಲೂ ಹೆಚ್ಚುತ್ತಿದ್ದು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು, 14 ಮತ್ತು 15ನೇ ಹಣಕಾಸಿನ ಆಯೋಗದಲ್ಲಿ ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಳ ಅಭಿವೃದ್ಧಿಗಾಗಿ ಹೆಚ್ಚು ಹಣ ಮೀಸಲಿಡಲಾಗಿದೆ ಅದರಂತೆ ಗ್ರಾಮಗಳಲ್ಲಿ ರಸ್ತೆ, ಚರಂಡಿ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಿ ಕೆಲಸ ನಿರ್ವಹಿಸಬೇಕು, ಗ್ರಾ.ಪಂ ಸದಸ್ಯರ ವೈಯಕ್ತಿಕ ಹಿತಾಸಕ್ತಿಯಿಂದಾಗಿ ಅಭಿವೃದ್ಧಿ ಕುಂಠಿತವಾಗಿದೆ, ಅವರೆಲ್ಲ ತಮ್ಮ ಜವಾಬ್ದಾರಿ ಅರಿತು ತಮ್ಮ ವ್ಯಾಪ್ತಿಗೆ ಬರುವ ಗ್ರಾಮಗಳ ಅಭಿವೃದ್ಧಿ ಮಾಡಿದ್ದರೆ ಸಮಸ್ಯೆಗಳು ಹೆಚ್ಚಾಗಿ ಬರುತ್ತಿರಲಿಲ್ಲ, ಮುಂದಿನ ದಿನಗಳಲ್ಲಾದರೂ ಆಡಳಿತಾಧಿಕಾರಿಗಳು ಸಮರ್ಥ ಕರ್ತವ್ಯ ನಿರ್ವಹಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದರು.
ಈ ವೇಳೆ ಪಂಚವಳ್ಳಿ, ಮಾಲಂಗಿ, ಚೌತಿ ಮತ್ತು ಚಿಟ್ಟೇನಹಳ್ಳಿ ಗ್ರಾ.ಪಂ ಸಭೆಗಳಲ್ಲಿ ಹಾಜರಿದ್ದ ಸಾರ್ವಜನಿಕರು ಮೂಲಭೂತ ಸೌಕರ್ಯ ಕೊರತೆ ನೀಗಿಸುವ ನಿಟ್ಟಿನಲ್ಲಿ ಪಂಚಾಯಿತಿ ವ್ಯಾಪ್ತಿಯಿಂದ ಸಮರ್ಪಕ ಕೆಲಸವಾಗುತ್ತಿಲ್ಲ ಎಂದು ಶಾಸಕರಿಗೆ ದೂರು ನೀಡಿ ಹಳ್ಳಿಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ಕೆಲಸ ನಿರ್ವಹಿಸುವಂತೆ ಕೋರಿದರು.