ತಾಲ್ಲೂಕಿನ ಬೆಟ್ಟದಪುರದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಪಟ್ಟಣದ ತಾಲ್ಲೂಕು ಕ್ರೀಡಾಂಗಣದ ಬಳಿ ನಿರ್ಮಿಸಿದ್ದ ವಿಶೇಷ ಹೆಲಿಪ್ಯಾಡ್ಗೆ ಹೆಲಿಕಾಪ್ಟರ್ ಮುಖಾಂತರ ಮಧ್ಯಾಹ್ನ 12.20ಕ್ಕೆ ಬಂದಿಳಿದ ಅವರನ್ನು ಶಾಸಕ ಕೆ.ಮಹದೇವ್ ಹಾಗೂ ತಾಲ್ಲೂಕು ದಂಡಾಧಿಕಾರಿ ಜೆ.ಮಹೇಶ್ ಹೂಗುಚ್ಚ ನೀಡಿ ಸ್ವಾಗತಿಸಿ ಬರಮಾಡಿಕೊಂಡರು. ನಂತರ ಸುದ್ದಿಗಾರರ ಪ್ರಶ್ನೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರವರು ಉತ್ತರಿಸಿ ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಸಮ್ಮಿಶ್ರ ಸರ್ಕಾರವಿದ್ದು ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿ ಮುಂಬರುವ ಲೋಕಾಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮುಂದುವರೆಸುವ ಕುರಿತು ತಿರ್ಮಾನಿಸಲಾಗುವುದು ಅಂತೆಯೇ ನನ್ನ ಸ್ಪರ್ಧೆಯ ಬಗ್ಗೆ ಇನ್ನು ನಿರ್ಧರಿಸಿಲ್ಲ ಮುಂಬರುವ ದಿನಗಳಲ್ಲಿ ಸ್ಪರ್ಧೆಯ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎಂದರು.
ರಸ್ತೆಯ ಮುಖಾಂತರ ಬೆಟ್ಟದಪುರಕ್ಕೆ ತೆರಳಿ ಕಾರ್ಯಕ್ರಮ ಮುಗಿದ ನಂತರ ಪಿರಿಯಾಪಟ್ಟಣದ ಪ್ರವಾಸಿ ಮಂದಿರಕ್ಕೆ ಆಗಮಿಸಿ ಭೋಜನದ ನಂತರ ಹೆಲಿಕಾಪ್ಟರ್ನಲ್ಲಿ ಬೆಂಗಳೂರಿನತ್ತ ಪ್ರಯಾಣಿಸಿದರು.