ಕೋವಿಡ್-19 ಎರಡನೇ ಅಲೆ ನಿಯಂತ್ರಣ ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳು, ನೋಡಲ್ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಉಪತಹಸೀಲ್ದಾರ್ ರವರು, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ರಾಜಸ್ವ ನಿರೀಕ್ಷಕರು , ಗ್ರಾಮ ಲೆಕ್ಕಾಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಲಾಯಿತು. 19/04/021

ಪಿರಿಯಾಪಟ್ಟಣ : ಕೋವಿಡ್ ನಿಯಂತ್ರಣದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿ ಹೊಂದಬೇಕು ಎಂದು ಶಾಸಕ ಕೆ. ಮಹದೇವ್ ಸೂಚಿಸಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಿಯಂತ್ರಣದ ಬಗ್ಗೆ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕೊರೊನಾದ ಎರಡನೇ ಅಲೆಯು ರಾಜ್ಯಾದ್ಯಂತ ಹೆಚ್ಚಾಗಿದ್ದು,ಸಾರ್ವಜನಿಕರ ರಕ್ಷಣೆ ಮಾಡುವಲ್ಲಿ ಸರಕಾರವು ಸೂಕ್ತ ಕ್ರಮಗಳನ್ನು ಕೈಗೊಂಡಿದೆ. ಆದರೆ ಇದರ ಬಗ್ಗೆ ಸಾರ್ವಜನಿಕರು ನಿರ್ಲಕ್ಷ್ಯ ವಹಿಸುತ್ತಿದ್ದು ನಿಯಮಾವಳಿಗಳ ಬಗ್ಗೆ ಅಧಿಕಾರಿವರ್ಗ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸೂಕ್ತ ಕ್ರಮಗಳು ಕೈಗೊಳ್ಳಬೇಕು. ಈ ವಿಷಯದಲ್ಲಿ ಯಾವುದೇ ಅಧಿಕಾರಿಗಳು ನಿರ್ಲಕ್ಷತನವಹಿ ಸಿದರೆ ಅಂಥವರ ವಿರುದ್ಧ ಕಠಿಣ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ದೂರು ನೀಡುತ್ತೇನೆ ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಎಚ್ಚರಿಕೆ ನೀಡಿದರು. ಗ್ರಾಮೀಣ ಭಾಗದ ಜನತೆ ಮತ್ತು ಕಾಡಂಚಿನ ಪ್ರದೇಶದಲ್ಲಿ ವಾಸಿಸುವ ಜನರು ಕೊರೂನಾ ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಹಿಂಜರಿಯುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು,ಆ ಭಾಗದ ಮುಖಂಡರ ಸಹಕಾರದೊಂದಿಗೆ ಕೆಲವು ವೈದ್ಯಾಧಿಕಾರಿಗಳ ಮೂಲಕ ಶಿಬಿರಗಳನ್ನು ಏರ್ಪಡಿಸಿದರೆ ಲಸಿಕೆ ಪಡೆಯಲು ತಿಳಿಸುತ್ತೇನೆ. ಸಾರ್ವಜನಿಕರು ತಮ್ಮ ಕುಟುಂಬದ ರಕ್ಷಣೆ ಜೊತೆಗೆ ಉತ್ತಮ ಆರೋಗ್ಯ ಪೂರ್ಣ ಸಮಾಜವನ್ನು ನಿರ್ಮಿಸಲು ಸಹಕರಿಸಬೇಕಾಗಿದೆ. ಆದ್ದರಿಂದ ಅಧಿಕಾರಿಗಳು ಸರ್ಕಾರದ ಸೂಕ್ತ ಆದೇಶಗಳನ್ನು ಜಾರಿಗೊಳಿಸಿ ಕೊರೋನ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪ್ರತಿಯೊಬ್ಬರಲ್ಲೂ ಲಸಿಕೆ ಪಡೆಯುವಂತೆ ಮನವೊಲಿಸಬೇಕು. ಈ ಬಗ್ಗೆ ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಿ ಕಾರ್ಯನಿರ್ವಹಿಸಬೇಕು ಮತ್ತು ಸಭೆ-ಸಮಾರಂಭಗಳನ್ನು ಸಾಧ್ಯವಾದಷ್ಟು ನಿಯಂತ್ರಿಸಬೇಕು ಎಂದು ತಿಳಿಸಿದರು.

Leave a Comment

Your email address will not be published. Required fields are marked *

error: Content is protected !!
Scroll to Top