
ಪಟ್ಟಣದ ಪ್ರವಾಸಿ ಮಂದಿರದ ಬಳಿ ಆಹಾರ ಕೀಟಗಳನ್ನು ಹಾಗು ಸುರಕ್ಷಾ ಪರಿಕರಗಳನ್ನು ವಿತರಿಸಲಾಯಿತು, ತಾಲ್ಲೂಕಿನ ಎಲ್ಲ ಆಶಾ ಹಾಗು ಅಂಗನವಾಡಿ ಕಾರ್ಯಕರ್ತರಿಗೆ ಅಗತ್ಯ ಆಹಾರ ಕೀಟಗಳನ್ನು ಹಾಗು ಸುರಕ್ಷಾ ಪರಿಕರಗಳನ್ನು ನೀಡಬೇಕೆಂದು ತಾಲ್ಲೂಕು ಆಡಳಿತಕ್ಕೆ ಸೂಚಿಸಲಾಗಿತ್ತು. ಅದರಂತೆ 2 ನೇ ಹಂತವಾಗಿ ಇಂದು ಬಾಕಿ ಉಳಿದ ಎಲ್ಲ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಆಹಾರ ಕೀಟಗಳನ್ನು ಹಾಗು ಸುರಕ್ಷಾ ಪರಿಕರಗಳನ್ನು ನೀಡಿದಂತಾಗುತ್ತದೆ.
ಕೋವಿಡ್ -19 ತಡೆಗಟ್ಟುವ ನಿಟ್ಟಿನಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಗ್ರಾಮಾಂತರ ಪ್ರದೇಶಗಳಲ್ಲಿ ಮನೆ ಮನೆ ಸಮೀಕ್ಷೆ ಮಾಡಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದೆ ಅವರ ಸೇವೆ ಆರೋಗ್ಯ ಇಲಾಖೆಗೆ ಬಹಳ ಅಗತ್ಯವಾಗಿದೆ ಎಂದು ತಿಳಿಸಿದರು. ಮನೆ ಮನೆ ಸಮೀಕ್ಷೆ ಮಾಡಿ ಕೋರೋನ ಸೋಂಕಿತರನ್ನು ಗುರುತಿಸಿ ಅವರನ್ನು ಕೋವಿಡ್ ಕೇಂದ್ರಗಳಿಗೆ ದಾಖಲಿಸುವಲ್ಲಿ ಮನೆಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಪಂಚ ಸೂತ್ರಗಳಾದ ಕೋವಿಡ್ ಮಿತ್ರ ದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದು ಸಂಕಷ್ಟ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಅವರು ತಮ್ಮ ಆರೋಗ್ಯದ ಬಗ್ಗೆಯೂ ಎಚ್ಚರಿಕೆ ವಹಿಸಿ ಸುರಕ್ಷತಾ ಪರಿಕರಗಳನ್ನು ಬಳಸಿಕೊಂಡು ಕೆಲಸ ಮಾಡಬೇಕು ಅವರ ಸೇವೆ ಬಹಳ ಅಗತ್ಯವಾಗಿದೆ ಅವರಿಗೆ ಉತ್ತೇಜನ ನೀಡುವ ಸಲುವಾಗಿ ಈಗ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸಲಾಗುತ್ತಿದೆ ಎಂದರು.

ಈ ಸಂದರ್ಭ ಪುರಸಭಾ ಅಧ್ಯಕ್ಷ ಮಂಜುನಾಥ್ ಸಿಂಗ್, ತಹಸೀಲ್ದಾರ್ ಕೆ.ಚಂದ್ರಮೌಳಿ, ತಾ.ಪಂ ಇಒ ಸಿ.ಆರ್ ಕೃಷ್ಣಕುಮಾರ್, ಮಾಜಿ ಸದಸ್ಯ ಎ.ಟಿ ರಂಗಸ್ವಾಮಿ, ಹಿರಿಯ ಆರೋಗ್ಯ ನಿರಿಕ್ಷಣಾಧಿಕಾರಿ ಕೆ.ಆರ್ ಪ್ರಕಾಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ತಾಲ್ಲೂಕು ಯೋಜನಾಧಿಕಾರಿ ಸುರೇಶ್ ಶೆಟ್ಟಿ, ಕೃಷಿ ಅಧಿಕಾರಿ ಉಮೇಶ್, ವಿವಿಧೆಡೆಯ ಮೇಲ್ವಿಚಾರಕರು ಹಾಜರಿದ್ದರು.