ಪಟ್ಟಣದ ಹುಣಸೆಕುಪ್ಪೆ ರಸ್ತೆಯ ನೌಕರರ ಬಡಾವಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರೂ. 57.90 ಕೋಟಿ ವೆಚ್ಚದ ಒಳ ಚರಂಡಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಚುನಾವಣಾ ಸಂದರ್ಭ ಪಟ್ಟಣ ಜನತೆಗೆ ನೀಡಿದ್ದ ಭರವಸೆಯಂತೆ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ, ಪಟ್ಟಣದ ಎಲ್ಲಾ ವಾರ್ಡ್ಗಳಿಗೂ ಕಾವೇರಿ ಕುಡಿಯುವ ನೀರಿನ ಪೂರೈಕೆ, ದಿನದ 24 ಗಂಟೆಯೂ ವಿದ್ಯುತ್ ಪೂರೈಕೆ, ರಸ್ತೆ ಅಭಿವೃದ್ದಿ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಇದಕ್ಕೆ ಸದಸ್ಯರ ಪಕ್ಷಾತೀತ ಬೆಂಬಲ ಅಗತ್ಯವಿದೆ. ತಾಲೂಕಿನಲ್ಲಿ ನೂತನ ಕೈಗಾರಿಕಾ ಘಟಕ ತೆರೆದು ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಚಿಂತನೆ ನಡೆಸಲಾಗುತ್ತಿದೆ ಎಂದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಪಟ್ಟಣದ ಜನತೆಗೆ ಕಾವೇರಿ ಕುಡಿಯುವ ನೀರು ಪೂರೈಕೆಗೆ ಕ್ರಮಕೈಗೊಂಡಿದ್ದು, ನಿವೇಶನ ರಹಿತರಿಗೆ ನಿವೇಶನ ವಿತರಿಸಿದ್ದು ಆದರೆ ನಂತರ ಅಧ್ಯಕ್ಷರಾದವರು ಈ ಬಗ್ಗೆ ಹೆಚ್ಚಿನ ಗಮನ ಹರಿಸದಿದ್ದರಿಂದ ಪಟ್ಟಣದಲ್ಲಿ ನಿವೇಶನ ರಹಿತರ ಸಂಖ್ಯೆ ಹೆಚ್ಚಿದೆ ಎಂದರು.