
ಪಟ್ಟಣದ ಡಿಪಿಬಿಎಸ್ ಸಾರ್ವಜನಿಕ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಸಕ ಕೆ.ಮಹದೇವ್ ರವರು ಮಾತನಾಡಿದರು.
ಕೋವಿಡ್ ನಿಂದಾಗಿ ಸಾರ್ವಜನಿಕರು ಅನೇಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದನ್ನು ಮನಗಂಡ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ಲಸಿಕೆಯನ್ನು ಪ್ರತಿಯೊಬ್ಬರಿಗೂ ಉಚಿತವಾಗಿ ನೀಡುತ್ತಿದೆ. ಅಲ್ಲದೆ ಲಸಿಕೆ ಕೊರತೆಯಾಗದಂತೆ ಮುಂಜಾಗ್ರತೆ ಕ್ರಮಗಳನ್ನು ಕೂಡ ವಹಿಸಿದೆ. ಇತರೆ ರಾಜ್ಯಗಳಲ್ಲಿ ಕೊರನ ವೈರಸ್ ವಿವಿಧ ರೀತಿಯ ರೂಪಾಂತರಗಳನ್ನು ಪಡೆದು ಕಾಯಿಲೆಯು ದ್ವಿಗುಣ ಗೊಳ್ಳುತ್ತಿದೆ. ಇದಕ್ಕೆ ಸಾರ್ವಜನಿಕರ ನಿರ್ಲಕ್ಷ್ಯತನವೇ ಮುಖ್ಯ ಕಾರಣವಾಗಿದ್ದು, ಕೋವಿಡ್ ನಿಯಂತ್ರಣ ಮಾಡಲು ಅನೇಕ ಇಲಾಖೆ, ಸಂಘ ಸಂಸ್ಥೆಗಳು ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿದ್ದು ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ತಿಳಿಸಿದರು.
ಇದೇ ಸಂಧರ್ಭದಲ್ಲಿ 700ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡರು ಮತ್ತು ಕೋವಿಡ್ ಲಸಿಕೆ ಹಾಕಿಸಿಕೊಂಡರು.