
ಸುಂಡವಾಳು, ಬೆಟ್ಟದತುಂಗ ಬಳಿಯ ಮೇಗಳಕೊಪ್ಪಲು, ಮಂಟಿ ಬಿಳಗುಲಿ ಹಾಗೂ ಬ್ಯಾಡರ ಬಿಳಗುಲಿ ಗ್ರಾಮಗಳ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಕೆ.ಮಹದೇವ್ ಅವರು ಮಾತನಾಡಿ ಪ್ರತಿ ಗ್ರಾ.ಪಂ ವ್ಯಾಪ್ತಿಯಲ್ಲಿ ಸರ್ವೋದಯ ಗ್ರಾಮ ಯೋಜನೆಯಡಿ ಹಿಂದುಳಿದ ಗ್ರಾಮದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ, ಇಒ ಸಿ.ಆರ್ ಕೃಷ್ಣಕುಮಾರ್ ಹಾಗೂ ಪಿಡಿಒ ಗಳೊಂದಿಗೆ ಸಭೆ ನಡೆಸಿ ತಾಲ್ಲೂಕಿನ 34 ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ಮೂಲಭೂತ ಸೌಕರ್ಯ ವಂಚಿತ ಗ್ರಾಮವೊಂದನ್ನು ಗುರ್ತಿಸಿ ಅಭಿವೃದ್ಧಿ ಪಡಿಸಲಾಗುವುದು ಹಾಗೂ 200 ಕಿ.ಮೀ ವ್ಯಾಪ್ತಿಯಲ್ಲಿ ನಮ್ಮ ಹೊಲ ನಮ್ಮ ರಸ್ತೆ ಯೋಜನೆಯಡಿ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ, ಹಳ್ಳಿಗಳಲ್ಲಿನ ಮೂಲಭೂತ ಸೌಕರ್ಯ ಸಮಸ್ಯೆ ಪರಿಹರಿಸಲು ಸ್ಥಳೀಯ ಗ್ರಾ.ಪಂ ಗಳು ಸಹ ಮುಂದಾಗಬೇಕು, ಮತದಾರರು ನನ್ನ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಿದ್ದಕ್ಕೆ ಚ್ಯುತಿ ಬರದ ಹಾಗೆ ಕರ್ತವ್ಯ ನಿರ್ವಹಿಸುತ್ತಿದ್ದು ನಮ್ಮ ಪಕ್ಷದ ಸರ್ಕಾರ ಅಧಿಕಾರದಲ್ಲಿ ಇಲ್ಲದಿದ್ದರೂ ತಾಲ್ಲೂಕಿನ ಅಭಿವೃದ್ಧಿ ವಿಚಾರವಾಗಿ ಹೋರಾಟ ನಡೆಸಿ ಅನುದಾನ ಮಂಜೂರು ಮಾಡಿಸುತ್ತಿದ್ದೇನೆ, ತಾಲ್ಲೂಕಿನ ಯಾವುದೇ ಗ್ರಾಮಕ್ಕೆ ಹೋದರೂ ಸಹ ಸಮಸ್ಯೆಗಳ ಸಂಬಂಧ ಸಾರ್ವಜನಿಕರು ನನ್ನನ್ನು ಪ್ರಶ್ನೆ ಮಾಡುತ್ತಾರೆ ಇದೇ ಮನೋಭಾವವನ್ನು ಈ ಹಿಂದೆ ಆಡಳಿತ ನಡೆಸಿದ ಜನಪ್ರತಿನಿಧಿಗಳ ಬಳಿಯೂ ಸಾರ್ವಜನಿಕರು ಮಾಡಿದ್ದರೆ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿತ್ತು, ಕೇವಲ ಅರ್ಜಿ ಕೊಟ್ಟು ಸುಮ್ಮನಾದರೆ ಯಾವುದೇ ಕೆಲಸಗಳು ಆಗುವುದಿಲ್ಲ, ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಹಿಂದೆ ಬಿದ್ದು ಮನವರಿಕೆ ಮಾಡಿಕೊಡುತ್ತಿದ್ದರೆ ಮಾತ್ರ ಕೆಲಸಗಳು ಆಗುತ್ತವೆ ಎಂದರು.
ತಾ.ಪಂ ಇಒ ಸಿ.ಆರ್ ಕೃಷ್ಣಕುಮಾರ್ ಮಾತನಾಡಿ ಗ್ರಾ.ಪಂ ಮುಖಾಂತರ ಹಳ್ಳಿಗಳ ಅಭಿವೃದ್ಧಿಗೆ ಸರ್ಕಾರದಿಂದ ಸಾಕಷ್ಟು ಅನುದಾನ ಬರುವುದರ ಜೊತೆಗೆ ನರೇಗಾ ಯೋಜನೆಯಡಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದ್ದು ಸಾರ್ವಜನಿಕರು ಸ್ಥಳೀಯ ಗ್ರಾ.ಪಂ ಮೂಲಕ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿದರು.
ಈ ಸಂದರ್ಭ ಪಿಡಬ್ಲ್ಯುಡಿ ಎಇಇ ಜಯಂತ್, ಜಿ.ಪಂ ಎಇಇ ಮಂಜುನಾಥ್ ಎಇ ಮೇಘ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ಬೆಟ್ಟದತುಂಗ ಗ್ರಾ.ಪಂ ಉಪಾಧ್ಯಕ್ಷೆ ಲಕ್ಷ್ಮಿ, ಸದಸ್ಯೆ ಪ್ರೀತಿ ಅರಸ್, ಸತೀಶ್, ಶಿವಣ್ಣ, ದೇವು, ಪಿಡಿಒ ಮಹದೇವ್, ಚಿಕ್ಕನೇರಳೆ ಗ್ರಾ.ಪಂ ಅಧ್ಯಕ್ಷೆ ಮೈತ್ರಮ್ಮನಟರಾಜ್, ಮಾಜಿ ಅಧ್ಯಕ್ಷರಾದ ಮೈಲಾರಪ್ಪ, ಲೋಕೇಶ್, ಪಿಡಿಒ ನಾರಾಯಣ್, ಜೆಡಿಎಸ್ ರಾಜ್ಯ ಸಮಿತಿ ಸದಸ್ಯೆ ನಜ್ಮಾನಜೀರ್, ಕಾರ್ಯದರ್ಶಿ ಪ್ರಕಾಶ್, ತಾ.ಪಂ ಮಾಜಿ ಉಪಾಧ್ಯಕ್ಷ ರಘುನಾಥ್, ಮುಖಂಡರಾದ ನಾಗಯ್ಯ, ಶ್ರೀನಿವಾಸ್, ಕಿರಣ್, ಗೋವಿಂದೇಗೌಡ, ಅಪ್ಪಾಜಿಗೌಡ, ರಾಜೇ ಅರಸ್ ರಾಮೇಗೌಡ ಪ್ರಭುಗೌಡ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಜನಪ್ರತಿನಿಧಿಗಳು ಗ್ರಾಮಸ್ಥರು ಹಾಜರಿದ್ದರು.