
ಬೆಟ್ಟದಪುರ ಸಮೀಪದ ಸುರಗಹಳ್ಳಿ ಗ್ರಾಮದಲ್ಲಿ ಅಂಕನಾಥೇಶ್ವರ ಸ್ವಾಮಿ ದೇವಾಲಯಕ್ಕೆ ಶಾಸಕ ಕೆ ಮಹದೇವ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು ಬಳಿಕ ಮಾತನಾಡಿದ ಅವರು ಗ್ರಾಮಸ್ಥರು ಹಾಗೂ ದಾನಿಗಳ ಸಹಕಾರದಿಂದ ಉತ್ತಮ ದೇವಾಲಯ ಮತ್ತು ಸಮುದಾಯ ಭವನ ನಿರ್ಮಾಣ ವಾಗುತ್ತಿದೆ ಎಲ್ಲಿಗೆ ಬರುವಂತಹ ಭಕ್ತಾದಿಗಳ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯಗಳ ವ್ಯವಸ್ಥೆಗೆ ಮೊದಲ ಆದ್ಯತೆ ನೀಡುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದರು ಮುಂಬರುವ ದಿನಗಳಲ್ಲಿ ಸಮುದಾಯ ಕೇಂದ್ರ ಮುಂದಿನ ಹಂತದ ನಿರ್ಮಾಣ ಹಾಗೂ ಅಭಿವೃದ್ಧಿಗಾಗಿ 5 ಲಕ್ಷ ರೂ ಅನುದಾನ ನೀಡುವುದಾಗಿ ತಿಳಿಸಿದರು.
ಇದೇ ವೇಳೆ ಅಂಕನಾಥೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಸಮಿತಿ ಮತ್ತು ಗ್ರಾಮಸ್ಥರ ವತಿಯಿಂದ ಶಾಸಕ ಕೆ ಮಹದೇವ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು ಗ್ರಾಮದ ಯಜಮಾನರಾದ ಮಾರುತಿ ಸೇರಿದಂತೆ ಗ್ರಾಮದ ಮುಖಂಡರು ಯುವಕರು ಭಾಗವಹಿಸಿದ್ದರು