
ಪಿರಿಯಾಪಟ್ಟಣ ತಾಲ್ಲೂಕಿನ ಆರ್ ಹರಳಹಳ್ಳಿ ಗ್ರಾಮ ಪರಿಮಿತಿಯಲ್ಲಿ 20 .೦೦ ಲಕ್ಷ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ, ಕೆಳಗನಹಳ್ಳಿ ಮತ್ತು ಕೆ ದೊಡ್ಡಕೊಪ್ಪಲು ಗ್ರಾಮ ಪರಿಮಿತಿಯಲ್ಲಿ 20 .೦೦ ಲಕ್ಷ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗು ಕೊತ್ತವಳ್ಳಿ ಕೊಪ್ಪಲು ಗ್ರಾಮ ಪರಿಮಿತಿಯಲ್ಲಿ 15.೦೦ ಲಕ್ಷ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ ಮಹದೇವ್ ರವರು ಗುದ್ದಲಿ ಪೂಜೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೆ ಮಹದೇವ್ ರವರು ಅವಕಾಶ ವಂಚಿತ ಕುಗ್ರಾಮಗಳಿಗೂ ಮೂಲ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ, ಕೋರೋನ ಸಂಕಷ್ಟದ ಸಮಯದಲ್ಲಿ ತಾಲೂಕಿನ ಅಭಿವೃದ್ಧಿಗಾಗಿ ಅನುದಾನ ಬರುವುದು ಕಷ್ಟವೇ ಸರಿ ಹೀಗಿದ್ದರೂ ಮತನೀಡಿ ಕೈಹಿಡಿದ ಜನರಿಗೆ ಕೈಲಾದ ಸೇವೆಗಳನ್ನು ಮಾಡಬೇಕೆಂಬ ಮಹದಾಸೆಯಿಂದ ಪ್ರತಿ ಗ್ರಾಮಗಳಿಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದರು.
ಪ್ರತಿ ಗ್ರಾಮಗಳಲ್ಲೂ ದೇವಸ್ಥಾನಗಳ ನಿರ್ಮಾಣಕ್ಕೆ ಹಾಗೂ ಸಮುದಾಯ ಭವನಗಳ ನಿರ್ಮಾಣಕ್ಕೆ ಒತ್ತಡ ಹೆಚ್ಚಾಗಿದೆ ಆದರೆ ಹಣಕಾಸಿನ ಕೊರತೆಯಿಂದ ಅಭಿವೃದ್ಧಿಯಲ್ಲಿ ಕುಂಠಿತವಾಗುತ್ತಿದೆ ಮುಂದಿನ ದಿನಗಳಲ್ಲಿ ಹಂತಹಂತವಾಗಿ ಗ್ರಾಮಗಳ ಅಭಿವೃದ್ಧಿಗೆ ಹಣ ನೀಡುವುದಾಗಿ ತಿಳಿಸಿದರು.
ಗ್ರಾಮೀಣ ಜನರ ಬದುಕಿಗೆ ಆಧಾರವಾಗಿ ಕೇಂದ್ರ ಸರ್ಕಾರದ ನರೇಗಾ ಕಾರ್ಯಕ್ರಮಗಳ ಮೂಲಕ ಕೆರೆಗಳ ಅಭಿವೃದ್ಧಿ ಜಲಸಂವರ್ಧನೆ ಅರಣ್ಯೀಕರಣ ಕೃಷಿಭೂಮಿಗೆ ಬದು ನಿರ್ಮಾಣ ಕೃಷಿ ಹೊಂಡ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ ಗ್ರಾಮೀಣ ಜನರಿಗೆ ಉದ್ಯೋಗ ದೊರೆಯಲಿದೆ ಎಂದರು.
ಈ ಸಂದರ್ಭ ತಹಸೀಲ್ದಾರ್ ಚಂದ್ರಮೌಳಿ ಕಾರ್ಯನಿರ್ವಹಣಾ ಅಧಿಕಾರಿ ಸಿ ಆರ್ ಕೃಷ್ಣಕುಮಾರ್ ಜಿಲ್ಲಾ ಪಂಚಾಯಿತಿ ಎ ಇ ಇ ಮಂಜುನಾಥ್ ಸೆಸ್ಕ್ ಇಲಾಖೆ ಎ ಇ ಇ ಕುಮಾರ್ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮೇಗೌಡ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ದೇಗೌಡ ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಸೋಮಯ್ಯ ತಾಲೂಕು ಜೆಡಿಎಸ್ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ ಹಾಗೂ ಮುಖಂಡರು ಹಾಜರಿದ್ದರು