
ಪಿರಿಯಾಪಟ್ಟಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕ ಕೆ.ಮಹದೇವ್ ಅವರು ಭೇಟಿ ಮಾಡಿ ತಾಲ್ಲೂಕಿನ ಜನತೆಯ ಪರವಾಗಿ ಶುಭಕೋರಿದರು.ತಾಲ್ಲೂಕಿನ ಅಭಿವೃದ್ಧಿಗಾಗಿ ನೂತನವಾಗಿ ಜಾರಿಯಾಗಬೇಕಾಗಿರುವ ಕಾಮಗಾರಿಗಳಿಗೆ ಅನುದಾನ ಮಂಜೂರು ಹಾಗೂ ಪ್ರಸ್ತುತ ಪ್ರಗತಿಯಲ್ಲಿರುವ ಕಾಮಗಾರಿಗಳು ಹಾಗೂ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಹಣ ಮಂಜೂರು ಮಾಡಿಸಿಕೊಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು, ವಿಪಕ್ಷ ಶಾಸಕನಾಗಿದ್ದರೂ ತಾಲ್ಲೂಕಿನ ಅಭಿವೃದ್ಧಿ ಹಿತದೃಷ್ಟಿಯಿಂದ ಬಿಎಸ್ ವೈ ಅವರ ಸಂಪುಟದಲ್ಲಿ ಸಚಿವರಾಗಿದ್ದವರು ನಮ್ಮ ಮನವಿಗೆ ಸ್ಪಂದಿಸಿ ಅನುದಾನ ಮಂಜೂರು ಮಾಡಿದ್ದರು ಅದರಂತೆ ಮುಂಬರುವ ದಿನಗಳಲ್ಲಿಯೂ ಪಕ್ಷಭೇದ ಮರೆತು ಹೆಚ್ಚು ಅಭಿವೃದ್ಧಿ ಕಾರ್ಯಗಳಿಗೆ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಒತ್ತು ನೀಡುವ ಭರವಸೆಯನ್ನು ಶಾಸಕ ಕೆ.ಮಹದೇವ್ ಅವರು ವ್ಯಕ್ತಪಡಿಸಿದರು.
ಇದೇ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಪುನರಾಯ್ಕೆಯಾಗಿರುವ ಸಚಿವರಾದ ಎಸ್.ಟಿ ಸೋಮಶೇಖರ್, ನೂತನ ಸಚಿವರುಗಳಾದ ವಿ.ಸೋಮಣ್ಣ, ಡಾ.ಅಶ್ವತ್ಥ್ ನಾರಾಯಣ್, ಹಾಲಪ್ಪ ಆಚಾರ್ ಅವರನ್ನು ಶಾಸಕ ಕೆ.ಮಹದೇವ್ ಅವರು ಭೇಟಿ ಮಾಡಿ ಶುಭ ಕೋರಿದರು.
ನೂತನವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಟಿ ಸೋಮಶೇಖರ್ ರವರಿಗೆ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೆ ಮಹದೇವ್ ರವರು ಭೇಟಿ ಮಾಡಿ ಅಭಿನಂದಿಸಿದರು ನೂತನವಾಗಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಆಚಾರ್ ಹಾಲಪ್ಪ ಬಸಪ್ಪ ರವರಿಗೆ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೆ ಮಹದೇವ್ ರವರು ಭೇಟಿ ಮಾಡಿ ಅಭಿನಂದಿಸಿದರು ನೂತನವಾಗಿ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ವಿ.ಸೋಮಣ್ಣ ರವರಿಗೆ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೆ ಮಹದೇವ್ ರವರು ಭೇಟಿ ಮಾಡಿ ಅಭಿನಂದಿಸಿದರು ನೂತನವಾಗಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಾ. ಸಿ ಎನ್ ಅಶ್ವಥ್ ನಾರಾಯಣ್ ರವರಿಗೆ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೆ ಮಹದೇವ್ ರವರು ಭೇಟಿ ಮಾಡಿ ಅಭಿನಂದಿಸಿದರು