ಸ್ವಚ್ಛ ಗ್ರಾಮ ನಿರ್ಮಾಣಕ್ಕಾಗಿ ಗ್ರಾಮಸ್ಥರು ಸಹಕರಿಸಬೇಕು ಎಂದು ಶಾಸಕ ಕೆ ಮಹದೇವ್ ತಿಳಿಸಿದರು. 16/08/2021

ಪಿರಿಯಾಪಟ್ಟಣ ತಾಲ್ಲೂಕಿನ ಮುತ್ತೂರು ಗ್ರಾಮ ಪಂಚಾಯಿತಿ ವತಿಯಿಂದ ಮುತ್ತೂರು ರಾಜೀವ ಕಾಲೋನಿ ನಿವಾಸಿಗಳಿಗೆ ಕಸ ವಿಂಗಡಣೆಯ ಬುಟ್ಟಿಗಳನ್ನು ಶಾಸಕ ಕೆ ಮಹದೇವ್ ವಿತರಿಸಿದರು
ಈ ವೇಳೆ ಮಾತನಾಡಿದ ಅವರು ನಮ್ಮ ಸುತ್ತ ಮುತ್ತಲು ಸ್ವಚ್ಛತೆ ಕಾಪಾಡಿಕೊಂಡರೆ ಆರೋಗ್ಯಕರ ಜೀವನ ನಡೆಸ ಬಹುದು ಸ್ವಚ್ಛ ಗ್ರಾಮ ನಿರ್ಮಾಣಕ್ಕಾಗಿ ಗ್ರಾಮಸ್ಥರು ಸಹಕರಿಸಬೇಕು ಪ್ರತಿ ಮನೆಗೆ ಘನತ್ಯಾಜ್ಯ ವಿಲೇವಾರಿ ಮಾಡುವ ಸಲುವಾಗಿ ತಾಲ್ಲೂಕಿನ ಪ್ರತಿಯೊಂದು ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಲಾಗುತ್ತಿದ್ದು ಈಗಾಗಲೇ ಸಾಂಕೇತಿಕವಾಗಿ ಚಾಲನೆ ನೀಡಲಾಗಿದೆ ಘನತ್ಯಾಜ್ಯ ಸಂಗ್ರಹಕ್ಕೆ ಗ್ರಾಮಸ್ಥರಿಗೆ ಪ್ಲಾಸ್ಟಿಕ್ ಡಬ್ಬಗಳನ್ನು ವಿತರಿಸಿದ್ದು ಅವುಗಳನ್ನು ನೀರು ತುಂಬಿಸಲು ಅಥವಾ ಇನ್ನಿತರ ಕೆಲಸಕಾರ್ಯಗಳಿಗೆ ಬಳಸದೆ ಮನೆಯ ಕಸ ಕಡ್ಡಿಗಳನ್ನು ಸಂಗ್ರಹಿಸಿ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡುವಂತೆ  ತಿಳಿಸಿದರು ಈ ಬಾರಿಯ ಅಕ್ಟೋಬರ್ 2 ರ ಗಾಂಧಿ ಜಯಂತಿ ದಿನದಂದು ತಾಲ್ಲೂಕಿನಾದ್ಯಂತ ಗ್ರಾಮಾಂತರ ಪ್ರದೇಶಗಳಲ್ಲಿ ಕಸ ವಿಲೇವಾರಿ ವಾಹನಕ್ಕೆ ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದರು
ಈ ಸಂದರ್ಭ ರಾಜೀವ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು ಕಾರ್ಯಕ್ರಮದಲ್ಲಿ ತಾ.ಪಂ. ಇಒ ಸಿ ಆರ್ ಕೃಷ್ಣಕುಮಾರ್, ಸಹಾಯಕ ನಿರ್ದೇಶಕ ರಘುನಾಥ್ , ಜಿ ಪಂ ಮಾಜಿ ಸದಸ್ಯ ಜಯಕುಮಾರ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಗ್ರಾ ಪಂ ಅಧ್ಯಕ್ಷ ಉಪಾಧ್ಯಕ್ಷ ಮತ್ತು ಸಿಬ್ಬಂದಿ, ಪಿ ಡಿ ಒ ಅಮಿತ್ ಜಿ ಪಂ ಎ ಇಇ ಮಂಜುನಾಥ್, ಆರ್ ಡಬ್ಲ್ಯೂ ಎಸ್ ಎ ಇಇ ಶಿವಕುಮಾರ್, ಸಿಡಿಪಿಓ ಕುಮಾರ್, ಬಿಇಓ ತಿಮ್ಮೇಗೌಡ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top