
ಪಿರಿಯಾಪಟ್ಟಣ : 15 ರಿಂದ 18 ವರ್ಷದ ಎಲ್ಲ ಮಕ್ಕಳಿಗೂ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಶಾಸಕ ಕೆ ಮಹದೇವ್ ಚಾಲನೆ ನೀಡಿದರು. ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ಸಾಂಕೇತಿಕವಾಗಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾಲೂಕಿನಾದ್ಯಂತ 15 – 18 ವರ್ಷದೊಳಗಿನ 11700 ಮಕ್ಕಳನ್ನು ಸರ್ಕಾರ ಗುರುತಿಸಿದ್ದು ಇವರುಗಳಿಗೆ ಶೀಘ್ರವೇ ಲಸಿಕೆ ನೀಡಬೇಕು. ಯಾರ ಮಾತಿಗೂ ಕಿವಿಗೊಡದೆ ಪ್ರತಿಯೊಬ್ಬರು ಸರ್ಕಾರ ನೀಡುವ ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಲಸಿಕೆಯನ್ನು ಪಡೆಯುವುದರಿಂದ ವಿದ್ಯಾರ್ಥಿಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಇದರಿಂದ ವಿದ್ಯಾರ್ಥಿಗಳ ದೇಹದಲ್ಲಿ ಖಾಯಿಲೆ ವಿರುದ್ಧ ಹೋರಾಟ ಮಾಡಲು ಸಹಾಯಕವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರು ತಪ್ಪದೇ ಲಸಿಕೆಯನ್ನು ಪಡೆಯಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮೈಮುಲ್ ಅಧ್ಯಕ್ಷ ಪಿ ಎಂ ಪ್ರಸನ್ನ, ತಾಲೂಕು ಆರೋಗ್ಯಾಧಿಕಾರಿ ಡಾಕ್ಟರ್ ಶರತ್ ಬಾಬು ಎಂ ಡಿಸಿಸಿ ಬ್ಯಾಂಕ್ ನಿರ್ದೇಶಿಕ ಸಿ ಎನ್ ರವಿ, ಸಾರ್ವಜನಿಕ ಆಸ್ಪತ್ರೆಯ ಪಿಪಿ ಲತಾ, ಪ್ರಕಾಶ್ ಪ್ರಾಂಶುಪಾಲ ಮಹದೇವ್ ಹಾಗೂ ಮಕ್ಕಳು ಹಾಜರಿದ್ದರು.