
ಕ್ರೀಡೆಯಿಂದ ಮನೋಲ್ಲಾಸದ ಜತೆಗೆ ದೈಹಿಕ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬಹುದು ಎಂದು ಶಾಸಕ ಕೆ ಮಹದೇವ್ ತಿಳಿಸಿದರು.
ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೌಕರರು ಮತ್ತು ಸಿಬ್ಬಂದಿ ಹಮ್ಮಿಕೊಂಡಿದ್ದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಸರ್ಕಾರಿ ನೌಕರರು ಕೆಲಸದ ಒತ್ತಡದಿಂದ ಬಳಲುತ್ತಿರುತ್ತಾರೆ. ಆದ್ದರಿಂದ ಇವರಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಶಾರೀರಿಕ ಮತ್ತು ಮಾನಸಿಕ ಲವಲವಿಕೆ ದೊರೆಯುತ್ತದೆ ನೂತನ ಚೈತನ್ಯವನ್ನು ಕಾಣಲು ಸಾಧ್ಯವಾಗುತ್ತದೆ ಕ್ರೀಡೆಯು ಪ್ರತಿಯೊಬ್ಬರಲ್ಲಿಯೂ ಉತ್ತಮ ಆಲೋಚನಾ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ ಈ ಕಾರ್ಯಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೃಷ್ಣಕುಮಾರ್ ತಮ್ಮನ್ನು ತೊಡಗಿಸಿಕೊಂಡು ನೌಕರರಲ್ಲಿ ಕ್ರೀಡಾಸಕ್ತಿ ಮೂಡಿಸುತ್ತಿರುವುದು ಸಂತೋಷದ ವಿಷಯವಾಗಿದೆ ಎಂದು ತಿಳಿಸಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಕುಮಾರ್ ಮಾತನಾಡಿ ಕ್ರೀಡೆಯು ಪ್ರತಿಯೊಬ್ಬರಲ್ಲಿಯೂ ಸಾಮರ್ಥ್ಯ ಸಮಾನತೆಯ ಸಂಕೇತವಾಗಿ ಕಾರ್ಯನಿರ್ವಹಿಸುತ್ತದೆ ಪ್ರತಿಯೊಬ್ಬರೂ ತಮ್ಮ ದ ದಿನನಿತ್ಯದ ಜೀವನದ ನಡುವೆ ಕ್ರೀಡೆ ಸೇರಿದಂತೆ ಇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ತಾಲೂಕು ಜೆಡಿಎಸ್ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ ಹಾಗೂ ಇಲಾಖೆಯ ನೌಕರರು ಸಿಬ್ಬಂದಿ ಹಾಜರಿದ್ದರು