ಪಟ್ಟಣದ ತಾಲೂಕು ಆಡಳಿತ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಡಾ.ಬಾಬು ಜಗಜೀವನರಾಮ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು, ಹಿಂದುಳಿದ ಸಮಾಜದಲ್ಲಿ ಜನಿಸಿ ಸಮಾಜದಲ್ಲಿನ ಎಲ್ಲ ಕೆಟ್ಟ ಸಂಪ್ರದಾಯಗಳ ವಿರುದ್ಧ ಹೋರಾಟ ನಡೆಸಿ ಸಮಾಜದ ಏಳಿಗೆಗೆ ಒತ್ತು ನೀಡಿ ಹಸಿರು ಕ್ರಾಂತಿಯ ಹರಿಕಾರ ಎಂದು ರಾಷ್ಟ ಮಟ್ಟದಲ್ಲಿ ಕೀರ್ತಿ ಗಳಿಸಿದ ಮಹಾನ್ ನಾಯಕ, ಇಂತಹ ನಾಯಕರುಗಳ ಆದರ್ಶ ಜೀವನವನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಆದಿ ಜಾಂಬವ ಸಂಘ ಜಿಲ್ಲಾ ಉಪಾಧ್ಯಕ್ಷ ಸೀಗೂರು ವಿಜಯ್ ಕುಮಾರ್ ಮಾತನಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ಹಕ್ಕುಗಳು ದೊರೆಯಬೇಕೆಂಬ ನಿಟ್ಟಿನಲ್ಲಿ ಹೋರಾಟ ನಡೆಸಿ ಕೇಂದ್ರದಲ್ಲಿ ಕಾರ್ಮಿಕ, ಸಮೂಹ, ಸಾರಿಗೆ, ರೈಲ್ವೆ, ಆಹಾರ ಮತ್ತು ಕೃಷಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸಚಿವರಾಗಿ ಸೇವೆ ಸಲ್ಲಿಸಿ ಉತ್ತಮ ಆಡಳಿತ ನೀಡಿ ರಾಷ್ಟ್ರಮಟ್ಟದಲ್ಲಿ ಹೆಸರುವಾಸಿಯಾಗಿದ್ದರು ಇಂತಹ ದಿಟ್ಟ ನಾಯಕರುಗಳ ಆದರ್ಶವನ್ನು ಇಂದಿನ ಯುವ ಪೀಳಿಗೆ ಅಳವಡಿಸಿಕೊಳ್ಳಬೇಕು ಎಂದರು.
ತಾ.ಪಂ ಸದಸ್ಯ ಎಸ್. ರಾಮು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಮೇಗೌಡ ಮಾತನಾಡಿದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ, ತಾ.ಪಂ ಇಒ ಡಿ.ಸಿ ಶ್ರುತಿ, ತಾಪಂ ಅಧ್ಯಕ್ಷೆ ಕೆ.ಆರ್ ನಿರೂಪ, ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಈರಯ್ಯ, ಸದಸ್ಯರುಗಳಾದ ಕುಂಜಪ್ಪ ಕಾರ್ನಾಡ್, ಮಲ್ಲಿಕಾರ್ಜುನ, ರಂಗಸ್ವಾಮಿ, ಶ್ರೀನಿವಾಸ್, ಶಿವಮ್ಮ, ಎಪಿಎಂಸಿ ಅಧ್ಯಕ್ಷ ರಾಜಯ್ಯ, ಮುಖಂಡರುಗಳಾದ ಶಿವಣ್ಣ, ಪಿ.ಮಹದೇವ್, ರಾಜಯ್ಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಮಾಜದ ಮುಖಂಡರುಗಳು ಹಾಜರಿದ್ದರು.