ಪಿರಿಯಾಪಟ್ಟಣ: ಶಾಸಕನಾದ ನಂತರ ಕೈಗೊಂಡ ತಾಲ್ಲೂಕಿನ ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ –
ಶಾಸಕ ಕೆ.ಮಹದೇವ್
ಮಾಜಿ ಶಾಸಕ ಕೆ.ವೆಂಕಟೇಶ್ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡುತ್ತಾ ನನ್ನ ವಿರುದ್ಧ ಇಲ್ಲಸಲ್ಲದ ಸುಳ್ಳು ಆರೋಪಗಳನ್ನು ಮಾಡಿದ್ದು ಅವುಗಳು ಸತ್ಯಕ್ಕೆ ದೂರವಾಗಿವೆ, ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದ ತಕ್ಷಣ ಸರ್ಕಾರದಿಂದ ಅನುದಾನ ಮಂಜೂರಾಗುವುದಿಲ್ಲ ಸಂಬಂಧಿಸಿದ ಇಲಾಖೆಗಳ ಮೂಲಕ ಸರ್ಕಾರಕ್ಕೆ ಆಗಿಂದಾಗ್ಗೆ ಮನವಿ ಸಲ್ಲಿಸಿ ಅನುದಾನ ಮಂಜೂರು ಮಾಡಿಸಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ, ಕಳೆದ ವಿಧಾನಸಭೆ ಚುನಾವಣೆ ಸಮೀಪ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರನ್ನು ತಾಲ್ಲೂಕಿಗೆ ಕರೆಸಿ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದರಷ್ಟೇ ಆದರೆ ಚುನಾವಣೆಯಲ್ಲಿ ಅವರು ಸೋತ ನಂತರ ಕಾಮಗಾರಿಗಳಿಗೆ ಹಣ ಬಿಡುಗಡೆಯಾಗಲಿಲ್ಲ, ನಾನು ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾದ ನಂತರ ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರಿಂದ ತಾಲ್ಲೂಕಿನ ಮೂಲಭೂತ ಸೌಕರ್ಯಗಳ ಬಗ್ಗೆ ಮನವಿ ನೀಡಿ ಹೊಸದಾಗಿ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡಿಸಲಾಯಿತು, ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ಪಟ್ಟಣದ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆ, ಪಾಲಿಟೆಕ್ನಿಕ್ ಕಾಲೇಜು ನಿರ್ಮಾಣ, ಬೆಟ್ಟದಪುರ ಹಾಗೂ ಪಿರಿಯಾಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ ನಿರ್ಮಾಣ, ಐಟಿಐ ಕಾಲೇಜು ನಿರ್ಮಾಣ ಸೇರಿದಂತೆ ಹತ್ತು ಹಲವು ಶಾಶ್ವತ ಕಾಮಗಾರಿಗಳಿಗೆ ಅನುದಾನ ತಂದು ಕಾಮಗಾರಿಗಳನ್ನು ಮುಗಿಸಲಾಯಿತು ಆದರೂ ಸಹ ಮಾಜಿ ಶಾಸಕರು ಮತ್ತು ಅವರ ಬೆಂಬಲಿಗರು ಇವೆಲ್ಲವೂ ನಮ್ಮ ಅವಧಿಯಲ್ಲಿನ ಅಭಿವೃದ್ಧಿ ಎಂದು ಹೇಳಿಕೊಂಡು ತಿರುಗುತ್ತಿರುವುದು ಹಾಸ್ಯಾಸ್ಪದ, ಕಳೆದ 4 ವರ್ಷಗಳಿಂದ ಸುಮ್ಮನಿದ್ದವರು ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರಿಗೆ ಸುಳ್ಳು ಮಾಹಿತಿ ನೀಡಲು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದು ಕಳೆದೆರಡು ವಿಧಾನಸಭಾ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ನನ್ನ ಸೋಲಿಗೆ ಅಪಪ್ರಚಾರವೇ ಕಾರಣವಾಯಿತು ಆದರೆ ತಾಲ್ಲೂಕಿನ ಜನತೆಗೆ ನನ್ನ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿಯಿದ್ದು ಸುಳ್ಳು ವದಂತಿಗಳಿಗೆ ಕಿವಿಗೊಡುವುದಿಲ್ಲ ಎಂಬ ವಿಶ್ವಾಸವಿದೆ, ನನ್ನ ಅವಧಿಯಲ್ಲಿನ ಅಭಿವೃದ್ಧಿ ಕಾಮಗಾರಿಗಳ ದಾಖಲೆಗಳೊಂದಿಗೆ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ ಎಂದು ತಿರುಗೇಟು ನೀಡಿದರು.