
ಪಿರಿಯಾಪಟ್ಟಣ : ಹೋಬಳಿಯ ಕೇಂದ್ರಸ್ಥಾನವಾದ ಬೆಟ್ಟದಪುರಕ್ಕೆ ಸುಮಾರು ₹45 ಕೋಟಿ ರೂಗಳ ಅನುದಾನ ನೀಡಿ ಅಭಿವೃದ್ಧಿ ಪಡಿಸಿದ್ದೇನೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು.
ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೊದಲ ಅಂತಸ್ತಿನ 9 ನೂತನ ಕೊಠಡಿಯನ್ನು ಸೋಮವಾರ ಉದ್ಘಾಟಿಸಿ ಬಳಿಕ ಮಾತನಾಡಿದ ಅವರು,ಶರವೇಗದಲ್ಲಿ ಬೆಳೆಯುತ್ತಿರುವ ಗ್ರಾಮಕ್ಕೆ ಅದಕ್ಕೆ ತಕ್ಕಂತೆ ಬೇಕಾಗುವ ಮೂಲ ಸೌಕರ್ಯಗಳನ್ನು ಒದಗಿಸಬೇಕು ಆಗ ಮಾತ್ರ ಆ ಕ್ಷೇತ್ರದ ಅಭಿವೃದ್ಧಿಯಾಗಲು ಸಾಧ್ಯ ಅದೇ ರೀತಿಯಲ್ಲಿ ಪ್ರಾಮಾಣಿಕವಾಗಿ ಸಾರ್ವಜನಿಕರಿಗೆ ಬೇಕಾಗುವ ಸೌಲಭ್ಯಗಳನ್ನು ಒದಗಿಸಿದ್ದೇನೆ ಅದರಲ್ಲಿ ನಾಡಕಚೇರಿ, ಶಾಲೆ ಹಾಗೂ ಕಾಲೇಜು ಕಟ್ಟಡ , ಅಂಗನವಾಡಿ ಕೇಂದ್ರ , ಗ್ರಾಮದ ಒಳಾಂಗಣದಲ್ಲಿ ಕಾಂಕ್ರೀಟ್ ರಸ್ತೆ, ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದ ತಪ್ಪಲಿನವರೆಗೂ ಡಾಂಬರೀಕರಣ , ಐಟಿಐ ಕಾಲೇಜ್, ಇನ್ನೂ ಹತ್ತು ಹಲವು ಅಭಿವೃದ್ಧಿ ಕಾಮಗಾರಿಗಳು ಮುಗಿದು ಉದ್ಘಾಟನೆಯಾಗಿವೆ.
ಇದಲ್ಲದೆ ತಾಲ್ಲೂಕಿನ 300 ಹಳ್ಳಿಗಳಿಗೂ ಕಾವೇರಿ ಕುಡಿಯುವ ನೀರು ಒದಗಿಸುವ ಬೃಹತ್ ಯೋಜನೆಯನ್ನು ಹಮ್ಮಿಕೊಂಡಿದ್ದು ಸುಮಾರು ₹ 240 ಕೋಟಿ ರೂಗಳ ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ಸಿಗಲಿದೆ ಎಂದರು.
ನಾವು ಮಾಡಿರುವ ಕೆಲಸಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕು, ತಾಲ್ಲೂಕನ್ನು ಸರ್ವಾಂಗೀಣ ಅಭಿವೃದ್ಧಿಗೆ ಕೊಂಡೊಯ್ಯುತ್ತಿರುವ ಶಾಸಕರಿಗೆ ಮುಂದಿನ ಚುನಾವಣೆಯಲ್ಲಿ ಸಹಕರಿಸಬೇಕೆಂದು ಕೋರಿದರು.
ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ ಮಾತನಾಡಿ ಯುವ ಜನಾಂಗವು ದುಶ್ಚಟಗಳನ್ನು ಬಿಟ್ಟು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಪ್ರಜಾಪ್ರಭುತ್ವದ ಮಹತ್ವವನ್ನು ತಿಳಿಯಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸೌಮ್ಯ, ಸದಸ್ಯರಾದ ರಾಜಶೇಖರ್, ಗಿರೀಶ್, ಮಲ್ಲಿಕಾರ್ಜುನ ಮಾತನಾಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಸದಸ್ಯರಾದ ಈಶ್ವರಚಾರಿ, ಇಮ್ರಾನ್,ಗಿರಿಗೌಡ, ಮುಖಂಡರಾದ ದೇವರಾಜು ಕೃಷ್ಣೇಗೌಡ ರಾಜೇಂದ್ರ ದೊರೆಸ್ವಾಮಿ, ಕುಮಾರ್, ರಘುರಾಯ, , ಉದಯಕುಮಾರ್ , ಪ್ರಾಂಶುಪಾಲರಾದ ಚೈತ್ರಾ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.