ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಕೆ.ಮಹದೇವ್ ಭೇಟಿ ನೀಡಿ ವೈದ್ಯರು ಮತ್ತು ಸಿಬ್ಬಂದಿ ಸಭೆ ನಡೆಸಿದರು.

ಪಿರಿಯಾಪಟ್ಟಣ: ರೋಗಿಗಳಿಗೆ ಚಿಕಿತ್ಸೆ ನೀಡಲು ಸೌಕರ್ಯಗಳ ಸಮಸ್ಯೆ ಇದ್ದರೆ ಗಮನಕ್ಕೆ ತಂದು ಬಗೆಹರಿಸಿಕೊಂಡು ತಾಲ್ಲೂಕಿನ ಜನತೆಗೆ ಉತ್ತಮ ವೈದ್ಯಕೀಯ ಸೌಲಭ್ಯ ನೀಡಿ ಎಂದು ಶಾಸಕ ಕೆ.ಮಹದೇವ್ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರು ಮತ್ತು ಸಿಬ್ಬಂದಿ ಸಭೆ ನಡೆಸಿ ಅವರು ಮಾತನಾಡಿದರು, ನಾನು ಶಾಸಕನಾದ ನಂತರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಹಲವು ಮೂಲಭೂತ ಸೌಕರ್ಯಗಳನ್ನು ಒದಗಿಸಿ ರೋಗಿಗಳಿಗೆ ಉತ್ತಮ ಸೇವೆ ನೀಡಲು ಅಗತ್ಯ ಕ್ರಮ ಕೈಗೊಂಡಿದ್ದೇನೆ ಆದರೂ ಸಹ ಕೆಲವು ಸಂದರ್ಭಗಳಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದು ಮುಂಬರುವ ದಿನಗಳಲ್ಲಿ ಯಾರಿಂದಲೂ ದೂರು ಕೇಳಿ ಬರದಂತೆ ಉತ್ತಮ ಸೇವೆ ನೀಡುವಂತೆ ಸೂಚಿಸಿ ಸ್ವಚ್ಛತೆಗೆ ಸಂಬಂಧಿಸಿದಂತೆ ಹೆಚ್ಚು ನಿಗಾ ವಹಿಸುವಂತೆ ಮುಖ್ಯ ಆಡಳಿತಾಧಿಕಾರಿ 

ಡಾ.ದೇವಿಕಾ ಅವರಿಗೆ ತಿಳಿಸಿ ಆಸ್ಪತ್ರೆ ಆವರಣದಲ್ಲಿ ಎಲ್ಲೆಂದರಲ್ಲಿ ವಾಹನ ನಿಲುಗಡೆಗೆ ಮಾಡಿ ಬೇರೊಬ್ಬರಿಗೆ ತೊಂದರೆಯಾಗದಂತೆ ನಿಗಾ ವಹಿಸಲು ಸೆಕ್ಯುರಿಟಿ ಗಾರ್ಡ್ ನೇಮಕ ಮಾಡಲು ಸೂಚಿಸಿ ತಜ್ಞ ವೈದ್ಯರ ಬಳಿ ಚಿಕಿತ್ಸೆಗೆ ಆಗಮಿಸುವ ರೋಗಿಗಳಿಗೆ ಟೋಕನ್ ಪದ್ಧತಿ ಅಳವಡಿಸಿ ಜನಸಂದಣಿ ತಪ್ಪಿಸುವಂತೆ ಸೂಚಿಸಿ ನೇತ್ರ ಶಸ್ತ್ರಚಿಕಿತ್ಸೆಗೆ ಅಗತ್ಯವಿರುವ ಉಪಕರಣಗಳ ಖರೀದಿಗಾಗಿ ಮನವಿ ನೀಡಿದರೆ ಸರ್ಕಾರದ ಗಮನ ಸೆಳೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ವೇಳೆ ಸಿಬ್ಬಂದಿ ಕುಂದುಕೊರತೆ ವಿಚಾರಿಸಿದರು. ಈ ಸಂದರ್ಭ ಆಸ್ಪತ್ರೆ ಮುಖ್ಯ ಆಡಳಿತಾಧಿಕಾರಿ ಡಾ.ದೇವಿಕಾ, ತಜ್ಞ ವೈದ್ಯರಾದ ಡಾ.ಪ್ರಭು, ಡಾ.ಸದಾಶಿವ, ಡಾ.ವಿಕ್ರಂ, ಡಾ.ಪ್ರಮೋದ್, ಡಾ.ಚಂದ್ರಾವತಿ, ಡಾ.ಅನಿಲ್ ಮತ್ತು ಸಿಬ್ಬಂದಿ ಇದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top