ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಶಾಸಕ ಕೆ.ಮಹದೇವ್ ಮಾತನಾಡಿದರು  

ಪಿರಿಯಾಪಟ್ಟಣ: ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸಿಗೆ ಶಾಂತಿ ನೆಮ್ಮದಿ ಸಿಗಲಿದೆ ಎಂದು ಶಾಸಕ ಕೆ.ಮಹದೇವ್ ಹೇಳಿದರು.

ತಾಲೂಕಿನ ಕಂಪಲಾಪುರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ಬಿ.ಸಿ.ಟ್ರಸ್ಟ್‌ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಸಹಯೋಗದಲ್ಲಿ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು, ಸಮಾಜದಲ್ಲಿ ಹಿಂದುಳಿದವರ ಅಭಿವೃದ್ಧಿಗಾಗಿ ಸಾಮಾಜಿಕ ಕಳಕಳಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ 

ಡಾ.ವೀರೇಂದ್ರ ಹೆಗಡೆಯವರು ಗ್ರಾಮಾಭಿವೃದ್ಧಿ ಯೋಜನೆ ಸ್ಥಾಪಿಸಿ ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ಮೂಲಕ ಹಲವು ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.

ಸಂಸ್ಥೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಅವರು ಮಾತನಾಡಿ ಧಾರ್ಮಿಕ ಕಾರ್ಯಕ್ರಮ ಮೂಲಕ ಎಲ್ಲರನ್ನು ಒಗ್ಗೂಡಿಸಿ ನಾವೆಲ್ಲರೂ ಒಂದೇ ನಮ್ಮಲ್ಲಿ ಭೇದಭಾವವಿಲ್ಲ ಎಂಬ ಅರಿವು ಮೂಡಿಸುವ ಉದ್ದೇಶದಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿದೆ, ಹಿರಿಯರನ್ನು ಗೌರವಿಸಿ ನಮ್ಮ ಸನಾತನ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ತಾ.ಪಂ ಇಒ ಸಿ.ಆರ್ ಕೃಷ್ಣಕುಮಾರ್ ಅವರು ಮಾತನಾಡಿ ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರ ಮಾಡುವ ಕೆಲಸವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೂಜ್ಯರ ಮಾರ್ಗದರ್ಶನದಲ್ಲಿ ನೆರವೇರಿಸುತ್ತಾ ವಿಶ್ವಕ್ಕೆ ಮಾದರಿಯಾಗಿದೆ ಎಂದರು.

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಅರ್ಚಕರ ನೇತೃತ್ವ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು.

ಈ ಸಂದರ್ಭ ಪೂಜಾ ಸಮಿತಿ ಅಧ್ಯಕ್ಷ ಕೆ.ಎನ್ ಜಯಣ್ಣ, ಗ್ರಾ.ಪಂ ಅಧ್ಯಕ್ಷೆ ಮಮತಾ, ಪುರಸಭಾ ಸದಸ್ಯೆ ಮಂಜುಳಾ, ಯೋಜನಾಧಿಕಾರಿ ಸುರೇಶ್ ಶೆಟ್ಟಿ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಮುಖಂಡರಾದ ಕೆ.ಕುಮಾರ್, ಕೃಷ್ಣೇಗೌಡ, ಕೆ.ಎಂ.ಲಕ್ಷ್ಮಣ್, ಯ.ಸ್ವಾಮಿಗೌಡ , ನಾಗೇಗೌಡ, ರಾಣಿ, ಪೂಜಾಸಮಿತಿ ಉಪಾದ್ಯಕ್ಷೆ ಅನುಪಮ , ಕಾರ್ಯದರ್ಶಿ ರವಿಕಲಾಶೆಟ್ಟಿ, ಜಂಟಿ ಕಾರ್ಯದರ್ಶಿ ರಾಣಿ, ಕೋಶಾಧಿಕಾರಿ ಮೋಹನ್, ಸಲಹಾ ಸಮಿತಿ ಹಾಗು ಸ್ವಸಹಾಯ ಸಂಘದ ಸದಸ್ಯರು, ಸೇವಾಪ್ರತಿನಿಧಿಗಳು ಇದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top