ಪಿರಿಯಾಪಟ್ಟಣದ ಹರವೆ ಮಲ್ಲರಾಜಪಟ್ಟಣ ಬಳಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಮಹದೇವ್ ಚಾಲನೆ ನೀಡಿದರು

ಪಿರಿಯಾಪಟ್ಟಣ: ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡುವ ಮೂಲಕ ಯೋಜನೆಗಳು ದೀರ್ಘ ಕಾಲ ಬಾಳಿಕೆ ಬರುವಂತೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಶಾಸಕ ಕೆ.ಮಹದೇವ್ ಹೇಳಿದರು.

ಪಟ್ಟಣದ ಹರವೆ ಮಲ್ಲರಾಜಪಟ್ಟಣ ವಾರ್ಡ್ ನಲ್ಲಿ ಪುರಸಭಾ ವ್ಯಾಪ್ತಿಯ ಎಸ್.ಎಫ್.ಸಿ ವಿಶೇಷ ಅನುದಾನದಡಿ ಅಂದಾಜು 55 ಲಕ್ಷ ವೆಚ್ಚದಲ್ಲಿ ವಿವಿಧ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು, ಶಾಸಕರು ಕೇವಲ ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ಪಟ್ಟಣದ ಅಭಿವೃದ್ಧಿಗೆ ಗಮನಹರಿಸಿಲ್ಲ ಎಂಬುದು ಸತ್ಯಕ್ಕೆ ದೂರವಾದ ಸಂಗತಿ, ನಾನು ಪಟ್ಟಣದಲ್ಲಿಯೇ ವಾಸಿಸುವುದರಿಂದ ಸ್ಥಳೀಯ ಸಮಸ್ಯೆಗಳ ಬಗ್ಗೆ ನನಗೆ ಅರಿವಿದೆ, ಈ ಹಿಂದೆ ಪುರಸಭೆ ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಕಾವೇರಿ ಕುಡಿಯುವ ನೀರಿನ ಸಂಪರ್ಕ, ನಿವೇಶನ ರಹಿತರಿಗೆ ವಸತಿ ಹಂಚಿಕೆ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಿದ್ದನ್ನು ಪಟ್ಟಣದ ಜನತೆ ಇಂದಿಗೂ ನೆನೆಯುತ್ತಾರೆ, ಎಲ್ಲಾ ವಾರ್ಡ್ ಗಳಿಗೆ ಪಕ್ಷಾತೀತವಾಗಿ ಸಮನಾಗಿ ಅನುದಾನ ನೀಡುವ ಮೂಲಕ ಪಟ್ಟಣದ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗಿದೆ, ನಗರೋತ್ಥಾನ ಯೋಜನೆಯಡಿ ಅನುದಾನ ಮಂಜೂರು ಮಾಡಿಸಿ ಪಟ್ಟಣದ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಲಾಗಿದೆ ಎಂದರು.

ಪುರಸಭಾ ಸದಸ್ಯ ಪ್ರಕಾಶ್ ಸಿಂಗ್ ಅವರು ಮಾತನಾಡಿ ಹರವೆ ಮಲ್ಲರಾಜಪಟ್ಟಣ ವಾರ್ಡ್ ವ್ಯಾಪ್ತಿಯಲ್ಲಿ ಹಲವು ಮೂಲಭೂತ ಸೌಕರ್ಯ ಸಮಸ್ಯೆ ಬಗೆಹರಿಸಲು ಶಾಸಕರು ಹಾಗೂ ಪುರಸಭೆ ವತಿಯಿಂದ ಅನುದಾನ ಮಂಜೂರಾಗಿ ಕಾಮಗಾರಿಗಳು ಪ್ರಗತಿಯಲ್ಲಿವೆ, ಶಾಸಕರ ಅಭಿವೃದ್ಧಿ ಮನಗಂಡು ಮುಂಬರುವ ಚುನಾವಣೆಯಲ್ಲಿಯೂ ಬೆಂಬಲಿಸುವಂತೆ ಕೋರಿದರು.

ಈ ವೇಳೆ ಸಭೆಯಲ್ಲಿದ್ದ ಸಾರ್ವಜನಿಕರು ಹರವೆ ಮಲ್ಲರಾಜಪಟ್ಟಣ ವ್ಯಾಪ್ತಿಯಲ್ಲಿ ಈ ಸ್ವತ್ತು ಪಡೆಯಲು ಆಗುತ್ತಿರುವ ವಿಳಂಬ ತಪ್ಪಿಸುವಂತೆ ಶಾಸಕರಿಗೆ ಮನವಿ ಮಾಡಿದಾಗ ಸ್ಥಳದಲ್ಲಿದ್ದ ಪುರಸಭೆ ಮುಖ್ಯಾಧಿಕಾರಿಗೆ ಸಮಸ್ಯೆ ಶೀಘ್ರ ಬಗೆಹರಿಸುವಂತೆ ಸೂಚಿಸಿದರು.  

ಇದೇ ವೇಳೆ ಹರವೆ ಮಲ್ಲರಾಜಪಟ್ಟಣ ವ್ಯಾಪ್ತಿಯ ಹಲವು ಮುಖಂಡರು ವಿವಿಧ ಪಕ್ಷ ತೊರೆದು ಶಾಸಕರ ಸಮ್ಮುಖ ಜೆಡಿಎಸ್ ಸೇರಿದರು.

ಈ ಸಂದರ್ಭ ಪುರಸಭೆ ಮುಖ್ಯಾಧಿಕಾರಿ ಮಹೇಂದ್ರ ಕುಮಾರ್ ಹಾಗೂ ಸಿಬ್ಬಂದಿ, ಅಧ್ಯಕ್ಷ ಕೆ.ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಸಿ ಕೃಷ್ಣ, ಸದಸ್ಯರಾದ ಮಂಜುನಾಥ್ ಸಿಂಗ್, ವಿನೋದ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್ ರವಿ, ಮುಖಂಡರಾದ ಮಂಜುನಾಥ್ ಸಿಂಗ್, ಶಂಕರ್ ಸಿಂಗ್, ಶಿವಶಂಕರ್, ನಿವೃತ್ತ ಉಪನ್ಯಾಸಕ ಟಿ.ರಾಜು, ಕುಮಾರ್, ರಮೇಶ್ ಹಾಗು ಹರವೆ ಮಲ್ಲರಾಜಪಟ್ಟಣ ವ್ಯಾಪ್ತಿಯ ಮುಖಂಡರು ಇದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top