ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಪಟ್ಟಣದಲ್ಲಿ ನಡೆದ ಆರೋಗ್ಯ ಸಿರಿ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು, ಹುದ್ದೆಯ ತಾರತಮ್ಯವಿಲ್ಲದೆ ಎಲ್ಲರೂ ಒಟ್ಟಾಗಿ ಒಂದೆಡೆ ಸೇರಿ ಹಬ್ಬದ ವಾತಾವರಣ ಸೃಷ್ಟಿಸಿರುವುದು ಶ್ಲಾಘನೀಯ, ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳು ಎಲ್ಲಾ ಇಲಾಖೆಗಳಲ್ಲೂ ಜರುಗಿ ತಾಲೂಕಿನ ಜನತೆಗೆ ಉತ್ತಮ ಸೇವೆ ನೀಡಿ ಅಭಿವೃದ್ಧಿಗೆ ಎಲ್ಲರೂ ಸಹಕರಿಸಿ ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಚ್ ಪ್ರಸಾದ್ ಅವರು ಮಾತನಾಡಿ ಎಲ್ಲರೂ ಒಗ್ಗೂಡಿ ಕಾರ್ಯಕ್ರಮ ಆಯೋಜಿಸಿರುವುದು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಲು ಸಹಕಾರಿಯಾಗುವ ಜೊತೆಗೆ ಆರೋಗ್ಯ ಸಿರಿ ಸಂಭ್ರಮ ರಾಜ್ಯದಲ್ಲಿಯೇ ಪ್ರಥಮ ಕಾರ್ಯಕ್ರಮವಾಗಿದ್ದು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕರ್ತವ್ಯ ನಿರ್ವಹಿಸಿ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಶರತ್ ಬಾಬು ಅವರು ಮಾತನಾಡಿಕ ಳೆದೆರಡು ವರ್ಷಗಳ ಹಿಂದೆ ಕೋವಿಡ್ ಸಂದರ್ಭ ನಿರಂತರವಾಗಿ ಕರ್ತವ್ಯ ನಿರ್ವಹಿಸಿ ಇಲಾಖೆಯಲ್ಲಿನ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಮುಂದಿನ ದಿನಗಳಲ್ಲಿ ಇನ್ನೂ ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿದೆ ಯಶಸ್ಸಿಗೆ ಪ್ರತಿಯೊಬ್ಬರು ಸಹಕಾರ ನೀಡಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಸೇವೆ ನೀಡಲು ಮುಂದಾಗೋಣ ಎಂದರು.
ಈ ವೇಳೆ ಆರೋಗ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು, ವಿವಿಧ ಕ್ರೀಡಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು, ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದವರು ಬೇರಡೆ ವರ್ಗಾವಣೆಯಾದವರು ಉನ್ನತ ಶಿಕ್ಷಣಕ್ಕೆ ಆಯ್ಕೆಯಾದ ವೈದ್ಯರು ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಹಾಗೂ ಎಮ್ ಬಿಬಿಎಸ್ ಗೆ ಪ್ರವೇಶ ಪಡೆದ ನೌಕರರ ಮಕ್ಕಳನ್ನು ಸನ್ಮಾನಿಸಿದ್ದು ವಿಶೇಷವಾಗಿತ್ತು, ತಾಲೂಕಿನಲ್ಲಿರುವ 21 ಪ್ರಾರ್ಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿಗೆ ನೆನಪಿನ ಕಾಣಿಕೆ ಅಭಿನಂದನ ಪತ್ರ ವಿತರಿಸಿ 2023 ನೇ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭ ಜಿಲ್ಲಾ ಕ್ಷಯರೋಗ ನಿಯಂತ್ರಣಧಿಕಾರಿ ಡಾ.ಸಿರಾಜ್ ಅಹಮದ್, ತಾ.ಪಂ ಇಓ ಸಿ.ಆರ್ ಕೃಷ್ಣಕುಮಾರ್, ಸಿಡಿಪಿಓ ಮಮತಾ, ಜೆಡಿಎಸ್ ತಾಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಮುಖಂಡ ಏ.ಟಿ ರಂಗಸ್ವಾಮಿ, ನಿರೀಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಕೆ.ಆರ್ ಪ್ರಕಾಶ್, ಹಿರಿಯ ಮತ್ತು ಕಿರಿಯ ಪ್ರಾಥಮಿಕ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ ಲತಾ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ ಅಧ್ಯಕ್ಷೆ ಉಷಾ, ಹಿರಿಯ ಮತ್ತು ಕಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ನೌಕರರ ಸಂಘದ ಅಧ್ಯಕ್ಷ ಅಣ್ಣೇಗೌಡ ಹಾಗೂ ಸಿಬ್ಬಂದಿ, ವೈದ್ಯರಾದ ಡಾ.ಸುನಿಲ್, ಡಾ.ಕೃಪೇಶ್, ಡಾ.ಸಂದೀಪ್,
ಡಾ.ಪ್ರೇಮನಾಥ್, ಡಾ.ಸುಜಾತ ಲಕ್ಷ್ಮಿ, ಡಾ.ಪೂಜಾ, ಡಾ.ತೇಜಸ್ವಿನಿ ಹಾಗೂ ತಾಲೂಕಿನ ವಿವಿಧೆಡೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು ಮತ್ತು ಸಿಬ್ಬಂದಿ, ಶುಶ್ರೂಷಕರು, ಸಮುದಾಯ ಆರೋಗ್ಯಾಧಿಕಾರಿಗಳಾದ ಮಹೇಂದ್ರ, ಗಿಡ್ಡೇಗೌಡ, ಶಿವು ಹಾಗೂ ವಿವಿಧೆಡೆಯ ಸಮುದಾಯ ಆರೋಗ್ಯಾಧಿಕಾರಿಗಳು, ಪ್ರಯೋಗಶಾಲ ತಂತ್ರಜ್ಞರಾದ ರವಿ, ಔಷಧಿ ವಿತರಕರು, ಡಿ ಗ್ರೂಪ್ ಸಿಬ್ಬಂದಿ ಮಧುಸೂದನ್, ಕುಮಾರ್, ಅನಿಲ್, ದರ್ಶನ್, ಚಾಲಕ ನಾಗರಾಜ್, ಆಶಾ ಕಾರ್ಯಕರ್ತೆಯರು ಇದ್ದರು.