ಬೆಳತೂರು ಗ್ರಾಮದಲ್ಲಿ ಮಾತನಾಡಿದ ಶಾಸಕರು ಶಾಸಕನಾದ ನಂತರ ಇವರೆಗೆ ನಾನು ಚಾಲನೆ ನೀಡಿದ ಯಾವುದೇ ಕಾಮಗಾರಿ ಪ್ರಾರಂಭವಾಗಿಲ್ಲ ಎಂದು ಮಾಹಿತಿ ನೀಡಿದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ, ತಾಲೂಕಿನ ಪ್ರತಿ ಗ್ರಾಮಗಳಿಗೂ ಅನುದಾನ ನೀಡಿ ಮೂಲಭೂತ ಸೌಲಭ್ಯ ನೀಡಿರುವುದನ್ನು ಮನಗಂಡು ಮುಂಬರುವ ಚುನಾವಣೆಯಲ್ಲಿ ಬೆಂಬಲಿಸಿ,
ನನ್ನ ಅವಧಿಯಲ್ಲಿ ಆಗುತ್ತಿರುವ ತಾಲೂಕಿನ ಅಭಿವೃದ್ಧಿಯನ್ನು ಸಹಿಸದ ವಿರೋಧ ಪಕ್ಷಗಳು ಚುನಾವಣೆ ಸಮೀಪ ನನ್ನ ವಿರುದ್ಧ ಇಲ್ಲ ಸಲ್ಲದ ಅಪಪ್ರಚಾರದಲ್ಲಿ ತೊಡಗಿವೆ ಮತದಾರರು ಇದ್ಯಾವುದಕ್ಕೂ ಕಿವಿಗೊಡದೆ ತಮ್ಮ ತಮ್ಮ ಗ್ರಾಮಗಳಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ಮನಗಂಡು ಮುಂಬರುವ ಚುನಾವಣೆಯಲ್ಲಿಯೂ ಬೆಂಬಲಿಸಿ ಗೆಲ್ಲಿಸಿದರೆ ಮತ್ತಷ್ಟು ಹೆಚ್ಚಿನ ಅಭಿವೃದ್ಧಿಗೆ ಸಹಕರಿಸಿದಂತಾಗುತ್ತದೆ, ತಾಲೂಕಿನ 303 ಗ್ರಾಮಗಳಿಗೆ ಕಾವೇರಿ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಜಾರಿಗೆ ತಂದಿದ್ದು ಶೀಘ್ರದಲ್ಲೇ ಮುಖ್ಯಮಂತ್ರಿಗಳನ್ನು ಕರೆಸಿ ತಾಲೂಕಿನಲ್ಲಿ ದೊಡ್ಡ ಕಾರ್ಯಕ್ರಮ ಮಾಡುವ ಮೂಲಕ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.
ಈ ವೇಳೆ ನಾರಳಾಪುರ ಆಯರಬೀಡು, ರಾಜೀವ ಗ್ರಾಮ ಮುತ್ತೂರು ಕೋಗಿಲವಾಡಿ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು.
ಈ ಸಂದರ್ಭ ಜೆಡಿಎಸ್ ತಾಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಆರ್ ಡಬ್ಲ್ಯೂಎಸ್ ಇಲಾಖೆ ಎಇಇ ಪ್ರಭು, ಚೌತಿ ಗ್ರಾ.ಪಂ ಅಧ್ಯಕ್ಷೆ ಗೌರಿ, ಉಪಾಧ್ಯಕ್ಷ ಲಕ್ಷ್ಮಣ್ ಪಟೇಲ್, ಮಾಜಿ ಉಪಾಧ್ಯಕ್ಷ ರವಿಚಂದ್ರ ಬೂದಿತಿಟ್ಟು, ಪಿಡಿಒ ಮೋಹನ್ ಕುಮಾರ್, ಮುಖಂಡರಾದ ಅಶೋಕ್, ಕೆ.ಎಲ್ ಸುರೇಶ್, ಕೆಂಪಣ್ಣ, ಪರಶಿವಮೂರ್ತಿ ಸ್ಥಳೀಯ ಜೆಡಿಎಸ್ ಜನಪ್ರತಿನಿಧಿಗಳು ಮುಖಂಡರು ಗ್ರಾಮಸ್ಥರು ಇದ್ದರು.