ಪಿರಿಯಾಪಟ್ಟಣ: ಸರ್ವ ಧರ್ಮದವರು ಶಾಂತಿಯಿಂದ ಬಾಳಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಬೆಂಬಲಿಸಿ ಗೆಲ್ಲಿಸುವಂತೆ ಶಾಸಕ ಕೆ.ಮಹದೇವ್ ಮನವಿ ಮಾಡಿದರು.
ತಾಲೂಕಿನ ವಿವಿದೆಡೆ ಪ್ರಚಾರ ಕೈಗೊಂಡು ಹೊನ್ನೇನಹಳ್ಳಿ ಗ್ರಾಮದಲ್ಲಿ ಅವರು ಮಾತನಾಡಿದರು, ತಾಲೂಕಿನ ಪ್ರತಿ ಗ್ರಾಮದ ಅಭಿವೃದ್ಧಿಗಾಗಿ ಜಾತ್ಯತೀತ ಹಾಗೂ ಪಕ್ಷಾತೀತವಾಗಿ ಅನುದಾನ ಮಂಜೂರು ಮಾಡಿಸಿ ಹಲವು ಕಾಮಗಾರಿಗಳನ್ನು ನಡೆಸಲಾಗಿದೆ, ಸ್ಥಳೀಯ ಮೂಲಭೂತ ಸೌಕರ್ಯಗಳ ಸಮಸ್ಯೆ ಪರಿಹಾರಕ್ಕೆ ಪ್ರಥಮ ಆದ್ಯತೆ ನೀಡಿದ್ದು ಮತ್ತಷ್ಟು ಹೆಚ್ಚಿನ ಅಭಿವೃದ್ಧಿಗಾಗಿ ಮುಂಬರುವ ಚುನಾವಣೆಯಲ್ಲಿಯೂ ಬೆಂಬಲಿಸಿ ಗೆಲ್ಲಿಸಬೇಕು, ಜೆಡಿಎಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ದೊರೆತರೆ ಪಂಚರತ್ನ ಯೋಜನೆ ಜಾರಿ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿ ಅಭಿವೃದ್ಧಿಯಾಗಲಿದೆ ಎಂದರು.
ಜೆಡಿಎಸ್ ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಕಾರ್ಯಾಧ್ಯಕ್ಷ ಆರ್.ಎಲ್ ಮಣಿ ಹಾಗೂ ಮುಖಂಡ ರಾಮಚಂದ್ರ ಅವರು ಮಾತನಾಡಿ ಸಾರ್ವಜನಿಕ ಸಮಸ್ಯೆಗಳಿಗೆ ಯಾವುದೇ ಸಂದರ್ಭ ಸ್ಪಂದಿಸಿ ಅಭಿವೃದ್ಧಿಗೆ ಒತ್ತು ನೀಡಿರುವ ಕೆ.ಮಹದೇವ್ ರ ಮತ್ತೊಂದು ಗೆಲುವಿಗೆ ಮತದಾರರು ಮುನ್ನುಡಿ ಬರೆದು ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ಈ ಸಂದರ್ಭ ಮುಖಂಡರಾದ ಗಗನ್, ಪ್ರೀತಿ ಅರಸ್, ಸುನಿತಾ ಮಂಜುನಾಥ್, ದೀಪು, ನವೀನ್, ಶಿವರಾಧ್ಯ, ಮಹದೇವ್, ಲೋಕೇಶ್, ಆರ್.ವಿ ನಂದೀಶ್, ವಿನಯ್, ಮಹೇಶ್, ಶಿವದೇವ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಕಾರ್ಯಕರ್ತರು ಇದ್ದರು.