ಪಿರಿಯಾಪಟ್ಟಣ ನಗರದ ವಿವಿಧ ವಾರ್ಡ್ ಗಳಲ್ಲಿ ಜೆಡಿಎಸ್ ಅಭ್ಯರ್ಥಿ ಶಾಸಕ ಕೆ.ಮಹದೇವ್ ತೆರೆದ ವಾಹನದಲ್ಲಿ ರೋಡ್ ಶೋ ನಡೆಸುವ ಮೂಲಕ ಮತ ಯಾಚಿಸಿದರು

ಪಿರಿಯಾಪಟ್ಟಣ: ಸ್ಥಳೀಯವಾಗಿ ಸದಾ ಸಾರ್ವಜನಿಕರಿಗೆ ಸಿಗುವ ನಿಮ್ಮ ಮನೆ ಮಗನಿಗೆ ನಗರದ ಜನತೆ ಹೆಚ್ಚು ಮತ ನೀಡಿ ಗೆಲ್ಲಿಸುವಂತೆ ಜೆಡಿಎಸ್ ಅಭ್ಯರ್ಥಿ ಶಾಸಕ ಕೆ.ಮಹದೇವ್ ಮನವಿ ಮಾಡಿದರು.

ಪಟ್ಟಣದ ವಿವಿಧ ವಾರ್ಡ್ ಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಅವರು ಮಾತನಾಡಿದರು, ನಾನು ಪಟ್ಟಣದಲ್ಲಿ ವಾಸಿಸುವುದರಿಂದ ಇಲ್ಲಿನ ಸ್ಥಳೀಯ ಸಮಸ್ಯೆಗಳ ಬಗ್ಗೆ ಅರಿವಿದ್ದು ಈ ಹಿಂದೆ ಪಟ್ಟಣ ಪಂಚಾಯಿತಿ ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಿ ನಿರ್ಗತಿಕರಿಗೆ ಮನೆ ವಿತರಿಸುವ ಮೂಲಕ ಪಟ್ಟಣಕ್ಕೆ ಕಾವೇರಿ ಕುಡಿಯುವ ನೀರು ಸರಬರಾಜು ಯೋಜನೆ ತರಲು ಶ್ರಮಿಸುವ ಮೂಲಕ ಮೂಲಭೂತ ಸೌಕರ್ಯಗಳ ಸಮಸ್ಯೆ ಬಗೆಹರಿಸಲು ಒತ್ತು ನೀಡಿ ಪಟ್ಟಣದ ಅಭಿವೃದ್ಧಿಗೆ ಹಗಲಿರುಳು ಪ್ರಾಮಾಣಿಕ ಕರ್ತವ್ಯ ನಿರ್ವಹಿಸಿದ್ದೆ, ಮೊದಲ ಬಾರಿಗೆ ಶಾಸಕನಾದ ಬಳಿಕ ಗ್ರಾಮಾಂತರ ಪ್ರದೇಶಗಳ ಜತೆ ಪಟ್ಟಣದ ಅಭಿವೃದ್ಧಿಗೂ ಸ್ಥಳೀಯ ಪುರಸಭೆ ಮೂಲಕ ಸರ್ಕಾರದಿಂದ ಹೆಚ್ಚು ಅನುದಾನ ತರುವ ಮೂಲಕ ಅಭಿವೃದ್ಧಿಗೆ ಒತ್ತು ನೀಡಿದ್ದು ನನ್ನ ಪಟ್ಟಣದಲ್ಲಿನ ನಿವಾಸಕ್ಕೆ ಆಗಮಿಸಿ ಸಮಸ್ಯೆಗಳ ಮನವಿ ನೀಡುವವರಿಗೆ ಸ್ಪಂದಿಸಿ ಸಮಸ್ಯೆಗಳನ್ನು ಶೀಘ್ರ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸುವ ಮೂಲಕ ಜನಪರ ಪಾರದರ್ಶಕ ಆಡಳಿತ ನೀಡಿ ನಿಮ್ಮ ಮನೆ ಮಗನಂತೆ ಕರ್ತವ್ಯ ನಿರ್ವಹಿಸಿದ್ದೇನೆ ನನ್ನ ಅವಧಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಮನಗಂಡು ಮುಂಬರುವ ಚುನಾವಣೆಯಲ್ಲಿಯೂ ಪಟ್ಟಣದ ಜನತೆ ಹೆಚ್ಚು ಮತ ನೀಡುವ ಮೂಲಕ ತಮ್ಮ ಮನೆ ಮಗನ ಗೆಲುವಿಗೆ ಸಹಕರಿಸುವಂತೆ ಕೋರಿದರು.

ಜೆಡಿಎಸ್ ತಾಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ ಅವರು ಮಾತನಾಡಿ ಪಟ್ಟಣದಲ್ಲಿ ಸ್ಥಳೀಯವಾಗಿ ವಾಸವಿದ್ದು ಸಾರ್ವಜನಿಕ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ಶಾಸಕ ಕೆ.ಮಹದೇವ್ ಅವರಿಗೆ ಮತ್ತೊಮ್ಮೆ ಪಟ್ಟಣದ ಜನತೆ ಹೆಚ್ಚು ಮತ ನೀಡುವ ಮೂಲಕ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು. 

ಈ ಸಂದರ್ಭ ಪುರಸಭಾ ಅಧ್ಯಕ್ಷ ಕೆ.ಮಹೇಶ್, ಉಪಾಧ್ಯಕ್ಷೆ ಆಶಾ, ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಸಿ ಕೃಷ್ಣ ಹಾಗೂ ಜೆಡಿಎಸ್ ಬೆಂಬಲಿತ ಸದಸ್ಯರು, ಮುಖಂಡರಾದ ಎಸ್.ರಾಮು, ಕೆ.ಪಿ ಚಂದ್ರಶೇಖರಯ್ಯ, ಶಿವಣ್ಣ ಹಾಗು ಸ್ಥಳೀಯ ಜೆಡಿಎಸ್ ಜನಪ್ರತಿನಿಧಿಗಳು ಕಾರ್ಯಕರ್ತರು ಇದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top