ತಾಲೂಕಿನ ಸತ್ತೇಗಾಲ ಗ್ರಾಮದ ಯುವ ರೈತ ಗುರುರಾಜ್ ಅವರಿಗೆ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಉದ್ಯಮಶೀಲತಾ ಯೋಜನೆಯಡಿ ದೊರೆತ ಟ್ರ್ಯಾಕ್ಟರ್ ವಿತರಿಸಿ ಅವರು ಮಾತನಾಡಿದರು, ಸರ್ಕಾರ ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿವಿಧ ನಿಗಮಗಳ ಮುಖಾಂತರ ಸಬ್ಸಿಡಿ ದರದಲ್ಲಿ ಯಂತ್ರೋಪಕರಣಗಳು ಹಾಗೂ ಕೃಷಿ ಪರಿಕರಗಳನ್ನು ವಿತರಿಸುತ್ತಿದ್ದು ರೈತರು ಸಂಬಂಧಿಸಿದ ಇಲಾಖೆಗಳ ಮುಖಾಂತರ ಮಾಹಿತಿ ಪಡೆದು ಅರ್ಜಿ ಸಲ್ಲಿಸಿ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು, ರೈತರು ಕೃಷಿ ಚಟುವಟಿಕೆಗೆ ಸಂಬಂಧಿಸಿದ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಅಧಿಕಾರಿಗಳನ್ನು ಭೇಟಿ ನೀಡಿ ಅಗತ್ಯ ಮಾಹಿತಿಗಳನ್ನು ಪಡೆದು ಕೃಷಿ ಚಟುವಟಿಕೆಗಳನ್ನು ಆರಂಭಿಸುವಂತೆ ತಿಳಿಸಿದರು.
ಈ ಸಂದರ್ಭ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಟಿ ಈರಯ್ಯ ಮುಖಂಡರಾದ ಸಂತೋಷ್, ಸೈಯದ್ ಇಲಿಯಾಸ್, ಶಂಕರೇಗೌಡ, ಪ್ರದೀಪ್ ಹಾಜರಿದ್ದರು.