ಪಟ್ಟಣದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು, ಹಿಂದಿನ ಎರಡು ವಿಧಾನಸಭಾ ಚುನಾವಣೆಗಳಲ್ಲಿ ವಿರೋಧಿಗಳ ಷಡ್ಯಂತ್ರದಿಂದ ಸೋಲುಂಟಾದ ಸಂದರ್ಭದಲ್ಲಿ ಕಾರ್ಯಕರ್ತರು ಹಿಂಜರಿಯದೆ ನನ್ನ ಪರವಿದ್ದು ಮೂರನೇ ಬಾರಿ ವಿಧಾನಸಭೆಗೆ ಸ್ಪರ್ಧಿಸಿದ ಚುನಾವಣೆಯಲ್ಲಿ ಮತದಾರರು ವಿರೋಧಿಗಳ ಮಾತಿಗೆ ಬೆಲೆ ಕೊಡದ ಹಾಗೆ ಪಕ್ಷಕ್ಕೆ ಹೆಚ್ಚು ಮತ ನೀಡುವ ಮೂಲಕ ಶಾಸಕನಾಗಿ ಆಯ್ಕೆಯಾಗಿದ್ದು ಪಕ್ಷದ ನಿಷ್ಠಾವಂತ ಕಾರ್ಯಕರ್ತರೆ ಶಾಸಕರು ಎಂದರು. ಅಧಿಕಾರಾವಧಿಯಲ್ಲಿ ಜನರ ಮನಸ್ಸಿನಲ್ಲಿ ಉಳಿಯುವಂಥ ಉತ್ತಮ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತಂದು ಪಕ್ಷ ಸಂಘಟಿಸುವುದಾಗಿ ಹೇಳಿದರು, ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ತಾಲೂಕಿಗೆ ಹೆಚ್ಚು ಅನುದಾನ ತಂದು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು ಬದಲಾದ ಪರಿಸ್ಥಿತಿಯಲ್ಲಿ ಈಗಿನ ಬಿಜೆಪಿ ಸರ್ಕಾರ ಅನುದಾನವನ್ನು ಹಿಂಪಡೆದಿರುವುದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದು ಬೇಸರ ವ್ಯಕ್ತಪಡಿಸಿದರು. ಹಿಂಪಡೆದಿರುವ ಅನುದಾನವನ್ನು ಹೇಗಾದರೂ ಸರಿ ಮತ್ತೆ ತಂದು ತಾಲೂಕಿನ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವುದಾಗಿ ಹೇಳಿದರು.
ತಾ.ಪಂ ಸದಸ್ಯ ಎಸ್.ರಾಮು, ಮುಖಂಡರಾದ ಗೋವಿಂದೇಗೌಡ, ಮೈಲಾರಪ್ಪ, ಅಣ್ಣಯ್ಯ ಶೆಟ್ಟಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿ.ಪಂ ಸದಸ್ಯರಾದ ಕೆ.ಎಸ್ ಮಂಜುನಾಥ್, ರಾಜೇಂದ್ರ, ಜಯಕುಮಾರ್, ರುದ್ರಮ್ಮ ನಾಗಯ್ಯ, ಮೈಮೂಲ್ ನಿರ್ದೇಶಕ ಪಿ.ಎಂ ಪ್ರಸನ್ನ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್ ರವಿ, ತಾ.ಪಂ, ಪುರಸಭೆ, ಗ್ರಾ.ಪಂ ಸದಸ್ಯರುಗಳು ಹಾಗೂ ತಾಲೂಕಿನ ವಿವಿಧೆಡೆಯ ಪಕ್ಷದ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.