
ತಾಲೂಕಿನ ಮಾಕೋಡು ಗ್ರಾಮದಲ್ಲಿ ಈಚೆಗೆ ಶ್ರೀ ಬಸವೇಶ್ವರ ಕಟ್ಟಡ ಕಾರ್ಮಿಕರು ಮತ್ತು ಇತರೆ ನಿರ್ಮಾಣ ಕಾರ್ಮಿಕರ ವತಿಯಿಂದ ನೊಂದಾಯಿತ ಕಾರ್ಮಿಕ ಫಲಾನುಭವಿಗಳಿಗೆ ಕಾರ್ಡ್ ವಿತರಣೆ ಮತ್ತು ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು, ನಮ್ಮ ರಾಜ್ಯದಲ್ಲಿ ವಿವಿಧ ಕಸುಬು ನಿರ್ವಹಿಸುವ ಅಧಿಕ ಕಾರ್ಮಿಕರಿದ್ದಾರೆ ಇವರನ್ನು ಸೂಕ್ತವಾಗಿ ಗುರುತಿಸುವ ಕೆಲಸ ಅಧಿಕಾರಿಗಳೇ ನಿರ್ವಹಿಸಬೇಕು ಹಾಗೂ ಇವರಿಗೆ ಸಿಗುವ ವಿವಿಧ ಸೌಲಭ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಹಾಗೂ ಕಾರ್ಮಿಕ ಇಲಾಖೆಯಲ್ಲಿ ಮೀಸಲಿಟ್ಟ ಹಣವನ್ನು ಕಾರ್ಮಿಕರಿಗೆ ಬಳಸಿಕೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಸಂಘದ ಅಧ್ಯಕ್ಷ ಕೆ.ಎಸ್ ಕೃಷ್ಣೇಗೌಡ ಮಾತನಾಡಿ ಗ್ರಾಮಾಂತರ ಪ್ರದೇಶದ ಕಾರ್ಮಿಕರಿಗೆ ಅರಿವು ಮೂಡಿಸುವ ಸಲುವಾಗಿ ಈ ಬಾರಿ ಗ್ರಾಮಾಂತರ ಪ್ರದೇಶಗಳಲ್ಲಿ ಆಯೋಜಿಸಲಾಗಿದ್ದು ಸಂಘದ ಪ್ರಯೋಜನ ಪಡೆಯದೆ ಇರುವ ಫಲಾನುಭವಿಗಳು ಇಲಾಖೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಂಡು ಸೂಕ್ತ ಮಾಹಿತಿ ನೀಡುವ ಮೂಲಕ ಕಾರ್ಮಿಕ ಗುರುತಿನ ಚೀಟಿ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಈ ಕಾರ್ಡ್ ಪಡೆಯುವಲ್ಲಿ ಮಧ್ಯವರ್ತಿಗಳಿಗೆ ಯಾವುದೇ ಹಣವನ್ನು ನೀಡದೆ ನೇರವಾಗಿ ಇಲಾಖಾಧಿಕಾರಿಗಳ ಜೊತೆ ಸಂಪರ್ಕ ಇಟ್ಟುಕೊಂಡು ನೊಂದಾಯಿತ ಕಾರ್ಡ್ನ್ನು ಪಡೆದುಕೊಳ್ಳಿ ಎಂದರು.
ಮಾಜಿ ಶಾಸಕ ಹೆಚ್.ಸಿ ಬಸವರಾಜು ಮಾತನಾಡಿ ಕಾರ್ಮಿಕರಿಗೆ ಸರ್ಕಾರ ಹಲವು ಸವಲತ್ತುಗಳನ್ನು ನೀಡುತ್ತಿದ್ದು ಅವುಗಳ ಸದ್ಬಳಕೆಗಾಗಿ ಆರ್ಥಿಕವಾಗಿ ಸಬಲರಾಗುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್ ರವಿ, ಕಾರ್ಮಿಕ ನಿರೀಕ್ಷಕ ಜಯಣ್ಣ, ಮಾಜಿ ಜಿ.ಪಂ ಉಪಾಧ್ಯಕ್ಷ ವಿ.ಜಿ ಅಪ್ಪಾಜಿಗೌಡ, ಮಾಜಿ ತಾ.ಪಂ ಅಧ್ಯಕ್ಷ ಜವರಪ್ಪ, ಗ್ರಾ,ಪಂ ಅಧ್ಯಕ್ಷೆ ರುಕ್ಕಮ್ಮ, ಮಾಜಿ ಅಧ್ಯಕ್ಷೆ ದ್ರಾಕ್ಷಾಯಣಮಮ್ಮ, ವಿಎಸ್ಎಸ್ಎನ್ ಅಧ್ಯಕ್ಷ ಮಹಾಲಿಂಗಪ್ಪ, ಉಪಾಧ್ಯಕ್ಷ ಬಸವರಾಜ್, ಕಾರ್ಮಿಕ ಸಂಘದ ಉಪಾಧ್ಯಕ್ಷ ಜವರೇಗೌಡ, ಪ್ರಧಾನ ಕಾರ್ಯದರ್ಶಿ ಗಣೇಶ್ ಸಂಘದ ಪದಾಧಿಕಾರಿಗಳು ಹಾಜರಿದ್ದರು.