
ಪಟ್ಟಣ ಹಾಗೂ ತಾಲೂಕಿನ ವಿವಿಧೆಡೆ ಸೋಮವಾರ 2.73 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ಸಂದರ್ಭ ಪುರಸಭೆಗೆ ನೂತನವಾಗಿ ಸೇರ್ಪಡೆಯಾಗಿರುವ ಮೆಲ್ಲಹಳ್ಳಿ ವಾರ್ಡ್ ನಲ್ಲಿ ಒಳಚರಂಡಿ ವ್ಯವಸ್ಥೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು, ಪಟ್ಟಣ ಪಂಚಾಯಿತಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ ಸಂದರ್ಭ ಪಟ್ಟಣದ ಸುತ್ತಮುತ್ತಲ ಹಳ್ಳಿಗಳನ್ನು ಪುರಸಭೆ ವ್ಯಾಪ್ತಿಗೆ ಸೇರಿಸಿದ್ದು ಆ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ಕೊರತೆ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದು ಪುರಸಭೆ ಅಧಿಕಾರಿಗಳಿಗೆ ಸಮಸ್ಯೆ ಪರಿಹರಿಸುವಂತೆ ಸೂಚಿಸಲಾಗಿದೆ, ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿಗೆ ಸಹಕರಿಸುವ ಭರವಸೆ ನೀಡಿದರು, ತಾಲೂಕಿನಲ್ಲಿ ಈ ಹಿಂದೆ ಇದ್ದ ಜನಪ್ರತಿನಿಧಿಗಳನ್ನು ಸರಿಯಾಗಿ ಕೆಲಸ ನಿರ್ವಹಿಸದ ಸಂದರ್ಭ ಸಾರ್ವಜನಿಕರು ಪ್ರಶ್ನಿಸಿರುವುದರಿಂದ ಹಲವೆಡೆ ಸಮಸ್ಯೆಗಳು ತಾಂಡವವಾಡುತ್ತಿವೆ, ಅಧಿಕಾರಾವಧಿಯಲ್ಲಿ ತಾಲೂಕಿನ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವ ಭರವಸೆ ನೀಡಿದರು.
ಈ ಸಂದರ್ಭ ತಾಲೂಕಿನ ಸೂಳೆಕೋಟೆ ಗ್ರಾಮದ ಸೇತುವೆ ದುರಸ್ತಿ ಮತ್ತು ಕೂಡು ರಸ್ತೆ ಕಾಮಗಾರಿ ಮತ್ತು ಬಿಳುಗುಂದ-ಆನಂದಗೆರೆ-ಗೌಡನಕಟ್ಟೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು.
ಪುರಸಭಾ ಸದಸ್ಯರಾದ ಸುವರ್ಣ, ಪ್ರಕಾಶ್ ಸಿಂಗ್, ಪಿ.ಸಿ ಕೃಷ್ಣ, ನಿರಂಜನ್, ಮಂಜುನಾಥ್ ಸಿಂಗ್, ಮುಖ್ಯಾಧಿಕಾರಿ ಚಂದ್ರಕುಮಾರ್, ತಹಸೀಲಾರ್ ಶ್ವೇತಾ ಎನ್ ರವೀಂದ್ರ, ತಾ.ಪಂ ಇಒ ಡಿ.ಸಿ ಶೃತಿ, ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಹಾಜರಿದ್ದರು.