ತಾಲೂಕಿನಲ್ಲಿ ಶೀಘ್ರ ನಡೆಯಬೇಕಾಗಿರುವ ಮೂಲಭೂತ ಸೌಕರ್ಯಗಳ ಕಾಮಗಾರಿ ಚಾಲನೆಗೆ ಮುಂದಿನ ಬಜೆಟ್ ನಲ್ಲಿ ಹೆಚ್ಚು ಅನುದಾನ ಕೋರಿ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು.

ಪಿರಿಯಾಪಟ್ಟಣ ತಾಲೂಕಿನ ರಾವಂದೂರು ಗ್ರಾಮದಲ್ಲಿ 30ಲಕ್ಷ ವೆಚ್ಚದ ಗೌರಿ ಗುಡಿಯಿಂದ ಬಸವೇಶ್ವರ ದೇವಸ್ಥಾನ ಮತ್ತು ಬಸ್ ನಿಲ್ದಾಣದ ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು, ಅಭಿವೃದ್ಧಿಗೆ ಹಣಕಾಸು ಬಿಡುಗಡೆ ಮಾಡಿದ ತಕ್ಷಣ ಹಂತಹಂತವಾಗಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತದೆ, ನನ್ನ  ಶಾಸಕ ಅವಧಿಯಲ್ಲಿ ಪ್ರತಿಯೊಂದು ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳಿಗೆ ಮೊದಲು ಆದ್ಯತೆ ನೀಡುತ್ತೇನೆ, ತಾಲೂಕಿನ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಗಳು ಹಾಳಾಗಿದ್ದು ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ತಂದು ಗ್ರಾಮಾಂತರ ಪ್ರದೇಶಗಳ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುತ್ತೆನೆ ಎಂದರು. ಪ್ರತಿ ಗ್ರಾಮಗಳಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆ ಸಂಪರ್ಕ ಸೇರಿದಂತೆ ಮೂಲಭೂತ ಸೌಕರ್ಯ ಕಲ್ಪಿಸುವುದಕ್ಕೆ ನನ್ನ ಮೊದಲ ಆದ್ಯತೆ ಎಂದರು.

      ರಾವಂದೂರು ವರ್ತಕರ ಸಂಘದ ಅಧ್ಯಕ್ಷ ಆರ್.ಎಲ್ ಮಣಿ ಮಾತನಾಡಿ ಗ್ರಾಮಾಂತರ ಪ್ರದೇಶಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿರುವ ಶಾಸಕ ಕೆ.ಮಹದೇವ್ ಅವರ ಕಾರ್ಯ ಶ್ಲಾಘನೀಯ, ಗ್ರಾಮದಲ್ಲಿ ಈಗಾಗಲೇ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದು ಬಾಕಿ ಇರುವ ಕಾಮಗಾರಿಗಳಿಗೆ ಶೀಘ್ರ ಚಾಲನೆ ನೀಡಿ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಂತೆ ಮನವಿ ಮಾಡಿದರು. 

    ಈ ಸಂದರ್ಭ ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ, ಇಒ ಡಿ.ಸಿ ಶ್ರುತಿ, ಉಪ ತಹಸೀಲ್ದಾರ್ ಕೆಂಚಪ್ಪ, ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ಆರ್.ಟಿ ಸತೀಶ್, ಜೆಡಿಎಸ್ ತಾಲೂಕು ಮಾಜಿ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಪಿಎಸಿಸಿಎಸ್ ಅಧ್ಯಕ್ಷ ಎಚ್.ಡಿ ವಿಜಯ್, ಪಿಡಬ್ಲುಡಿ ಎಇಇ ನಾಗರಾಜ್, ಜಿ.ಪಂ ಎಇಇ ಪ್ರಭು, ಮುಖಂಡರಾದ ಮಹದೇವ್, ನಂದೀಶ್, ಬಸವಣ್ಣ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು. 

Leave a Comment

Your email address will not be published. Required fields are marked *

error: Content is protected !!
Scroll to Top