
ತಾಲೂಕಿನ ವಿವಿಧೆಡೆ ಸೋಮವಾರದಂದು ರೂ.2ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಹಮ್ಮಿಗೆ ಗ್ರಾಮದಲ್ಲಿ ಅವರು ಮಾತನಾಡಿದರು, ತಾಲೂಕಿನಲ್ಲಿ 400ಕ್ಕೂ ಹೆಚ್ಚು ಹಳ್ಳಿಗಳಿವೆ, ಎಲ್ಲಾ ಹಳ್ಳಿಗಳ ಅಭಿವೃದ್ಧಿ ಪಡಿಸುವುದು ನನ್ನ ಕರ್ತವ್ಯವಾಗಿದೆ, ಅಭಿವೃದ್ಧಿ ವಿಚಾರದಲ್ಲಿ ಕಾರ್ಯಕರ್ತರು ವಿರೋಧಿಗಳ ಮಾತಿಗೆ ಕಿವಿಗೊಡದೆ ಶಾಸಕನಾಗಿ ಆಯ್ಕೆಯಾದಾಗಿನಿಂದ ತಮ್ಮ ಗ್ರಾಮಗಳಲ್ಲಿ ಕೈಗೊಂಡಿರುವ ಅಭಿವೃದ್ಧಿಗಳ ಬಗ್ಗೆ ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಡಿ, ಸ್ವಾತಂತ್ರ್ಯ ಬಂದು 70 ವರ್ಷಗಳಾದರೂ ತಾಲೂಕಿನ ಅಭಿವೃದಿ ಕುಂಠಿತವಾಗಿರುವುದು ನಮ್ಮ ದೌರ್ಭಾಗ್ಯ, ಶಾಸಕನಾಗಿ ಎರಡು ವರ್ಷವಾಗಿದೆ ಒಂದೇ ಹಂತದಲ್ಲಿ ಎಲ್ಲಾ ಹಳ್ಳಿಗಳ ಅಭಿವೃದ್ಧಿ ಅಸಾಧ್ಯ, ಸರ್ಕಾರದ ಮಟ್ಟದಲ್ಲಿ ಎಲ್ಲರ ವಿಶ್ವಾಸ ಗಳಿಸಿ ತಾಲೂಕಿಗೆ ಬೇಕಾಗಿರುವ ಅನುದಾನ ತರುವಲ್ಲಿ ಸಂಬಂಧಿಸಿದವರ ಬಳಿ ಮನವಿ ಸಲ್ಲಿಸುತ್ತೇನೆ, ಇದರಿಂದ ಸಾರ್ವಜನಿಕರು ಸಹಕರಿಸಬೇಕು.
ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡುತ್ತಿಲ್ಲ, ಜನರಿಂದ ಆಯ್ಕೆಯಾದ ನಾವುಗಳು ಜನರ ಸಮಸ್ಯೆ ಹಾಗೂ ಗ್ರಾಮಗಳ ಅಭಿವೃದ್ಧಿ ಮಾಡಬೇಕು ಹೊರತು ಮಾಡುವ ಕೆಲಸಕ್ಕೆ ಅಡ್ಡಿಪಡಿಸಬಾರದು ಎಂದರು.
ಈ ಸಂದರ್ಭ ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ, ಇಒ ಡಿ.ಸಿ ಶ್ರುತಿ, ಪಿಡಬುಡಿ ಎಇಇ ನಾಗರಾಜ್, ಜಿ.ಪಂ ಎಇಇ ಪ್ರಭು, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್ ರವಿ, ತಾ.ಪಂ ಮಾಜಿ ಉಪಾಧ್ಯಕ್ಷ ರಘುನಾಥ್, ಚಿಟ್ಟೆನಹಳ್ಳಿ ಗ್ರಾ.ಪಂ ಅಧ್ಯಕ್ಷೆ ಮಮತಾ, ಉಪಾಧ್ಯಕ್ಷೆ ಜಯಮ್ಮ, ಸದಸ್ಯ ಸ್ವಾಮಿಗೌಡ, ಪಿಡಿಒ ನರಸಿಂಹ ಮೂರ್ತಿ, ಮುಖಂಡರಾದ ಚಂದ್ರಶೇಖರಯ್ಯ, ಸುರೇಶ್, ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.